ಸುಳ್ಯ

ಚಿನ್ನಾಭರಣ ಕಳವಾದ ಬುಡ್ಲೆಗುತ್ತು ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ, ಆರೋಪಿಗಳ ಪತ್ತೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ

ನ್ಯೂಸ್ ನಾಟೌಟ್ : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಕನಕಮಜಲು ಗ್ರಾಮದ ಬುಡ್ಲೆಗುತ್ತು ಮನೆಗೆ ಬುಧವಾರ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಈ ವೇಳೆ ಶಾಸಕಿ ಮನೆಯವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

ಜು.16ರಂದು ರಾತ್ರಿ ಯುರೇಶ್ ಅವರ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದವು. ಸದ್ಯ ಕಳ್ಳತನಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಶಾಸಕರು ಮಾಹಿತಿ ಪಡೆದುಕೊಂಡರು. ಮಾತ್ರವಲ್ಲ ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚುವುದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಯುರೇಶ್ ಬುಡ್ಡೆಗುತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಅರಂತೋಡು: ಎರಡು ಕಾರು, ಒಂದು ಸ್ಕೂಟಿ ನಡುವೆ ಸರಣಿ ಅಪಘಾತ, ವಾಹನಗಳು ಜಖಂ

76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ,ಪ್ರೀತಿ ಕಲಾ ಮತ್ತು ಕ್ರೀಡಾಸಂಘ ಕಲ್ಲಪ್ಪಳ್ಳಿ ಇದರ ವತಿಯಿಂದ ಆಚರಣೆ

ಸುಳ್ಯದ ಜಟ್ಟಿಪಳ್ಳ ತಿರುವಿನ ಬಳಿ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ..! ವಾಹನಗಳು ಜಖಂ..!