ಕ್ರೈಂ

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತೆ ಆತ್ಮಹತ್ಯೆಗೆ ಶರಣು 

427

ಸುಳ್ಯ: ಇಲ್ಲಿನ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಆಯೀಶಾ ಎಂದು ಗುರುತಿಸಲಾಗಿದೆ. ಕಳೆದ ವರ್ಷ ವಷ್ಟೇ ಕಾಸರಗೋಡಿನ ಯುವಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಆಯೇಶಾ ಸುಳ್ಯದಲ್ಲಿ ವಾಸವಿದ್ದರು. ಇವರ ಪತಿ ವಿದೇಶದಲ್ಲಿದ್ದಾರೆ.

ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಕಾರಣ ಏನು ಅನ್ನುವುದು ಇನ್ನೂ ತಿಳಿದು ಬಂದಿಲ್ಲ. ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಆಕೆಯನ್ನು ಮನೆಯವರು ಕೆಳಕ್ಕಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

See also  ಕಾಂತಮಂಗಲ ಹೊಳೆ ಬದಿಯಲ್ಲಿ 4 ವರ್ಷದ ಮಗು ಪತ್ತೆ..! ಸುಳ್ಯ ಪೊಲೀಸ್ ಠಾಣೆಗೆ ಸಂಪರ್ಕಿಸಲು ಸೂಚನೆ
  Ad Widget   Ad Widget     Ad Widget   Ad Widget   Ad Widget   Ad Widget