ಶಿಕ್ಷಣಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ವ್ಯಸನ ಕುರಿತಾದ ಜಾಗೃತಿ ಕಾರ್ಯಕ್ರಮ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸುವಂತೆ ಎಸ್.ಐ ಸಂತೋಷ್ ಬಿ.ಪಿ. ಕರೆ

ನ್ಯೂಸ್ ನಾಟೌಟ್: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಕಾನೂನು ಜಾಗೃತಿ ಅರಿವು ಕಾರ್ಯಕ್ರಮ ಫೆ. 12 ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ಭಾಗವಹಿಸಿ ಮಾತನಾಡಿ, ಮಾದಕ ವಸ್ತುಗಳ ಬಳಕೆ ತುಂಬಾ ಅಪಾಯಕಾರಿ. ವಿದ್ಯಾರ್ಥಿಗಳು ಮಾದಕ ವ್ಯಸನ ಹಾಗೂ ಇತ್ಯಾದಿ ಯಾವುದೇ ದುಷ್ಚಟಗಳಿಗೆ ಬಲಿಯಾಗಬಾರದು ಎಂದರು. ಜೊತೆಗೆ ಗಾಂಜಾ ಮತ್ತಿತರ ಮಾದಕ ಪದಾರ್ಥಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಮಾದಕ ಪದಾರ್ಥಗಳ ಮಾರಾಟ ಅಥವಾ ಸೇವನೆಯಂತಹ ಚಟುವಟಿಕೆ ಕಂಡು ಬಂದಲ್ಲಿ ತಕ್ಷಣವೇ ಮಾಹಿತಿ ನೀಡುವುದರ ಮೂಲಕ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ ಎಂದು ಕರೆ ನೀಡಿದರು.
ಸೈಬರ್ ಅಪರಾಧ, ಪೋಕ್ಸೋ ಕಾಯ್ದೆ ಹಾಗೂ ರಸ್ತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಅರಿತು ಅದನ್ನು ಪಾಲಿಸುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಕಾಲೇಜಿನ ಆಡಳಿತಾಧಿಕಾರಿಯಾದ ಚಂದ್ರಶೇಖರ ಪೇರಾಲು ಮಾತನಾಡಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು ಅಲ್ಲದೇ ಸದಾ ಕ್ರೀಡೆ, ಆಟೋಟ ಎನ್.ಎಸ್.ಎಸ್, ಎನ್.ಸಿ.ಸಿ ಯಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಲ್ಲಿ ಮಾದಕ ವ್ಯಸನದ ಬಲಿಯಾಗುವುದನ್ನು ತಡೆಗಟ್ಟಬಹುದು ಎಂದು ಕಿವಿಮಾತು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ರತ್ನಾವತಿ ಡಿ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ Lt ಸಿತಾರಾಮ ಎಮ್. ಡಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ ಉಪಸ್ಥಿತರಿದ್ದರು.

ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಎಂ ಕಾರ್ಯಕ್ರಮ ನಿರೂಪಿಸಿದರು. ಡಾ. ಮಮತಾ ಕೆ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.

Related posts

ಸುಳ್ಯ: ಮಡಿಕೇರಿ ಮೂಲದ ವ್ಯಕ್ತಿ ಅರಂಬೂರಿನಲ್ಲಿ ಹೊಳೆಗೆ ಬಿದ್ದು ನಾಪತ್ತೆ, ಸಾವಿನ ಶಂಕೆ;ಸ್ನಾನಕ್ಕೆಂದು ಇಳಿದವರಿಗೆ ಆಗಿದ್ದೇನು?

ಸುಳ್ಯ:ಕಳೆದ ಒಂದು ವರ್ಷಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ನಿಧನ,ಕಣ್ಣೀರಲ್ಲಿ ಕುಟುಂಬ..

ಸಂಪಾಜೆ : ನಾಳೆ (ಸೆ.2)ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಂಕಷ್ಟ ಹರ ಚತುರ್ಥಿಪೂಜೆ