ಸುಳ್ಯ: ದೂರದ ಮಣಿಪುರದ ನೊಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಷಾ ಸುಳ್ಯದಲ್ಲಿ ಪ್ರೊಬೆಷನರಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಸದ್ಯ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸುತ್ತಿರುವ ಅನಿತಾ ಲಕ್ಷ್ಮೀಯವರು ಕೆಲವು ದಿನಗಳ ಕಾಲ ರಜೆಯಲ್ಲಿದ್ದಾರೆ. ಅವರು ರಜೆಯಿಂದ ಹಿಂದಿರುಗುವವರೆಗೆ ಇವರು ಹುದ್ಧೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಅಕ್ರಂ ಷಾ ಅವರು ಐಎಎಸ್ ಪಾಸ್ ಮಾಡಿ ಕರ್ನಾಟಕ ಕೇಡರ್ ಅಧಿಕಾರಿಯಾಗಿ ಬಂದಿದ್ದಾರೆ. ಕೆಲವು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ವೃತ್ತಿ ತರಬೇತಿ ಪಡೆಯುತ್ತಿದ್ದಾರೆ.
previous post