ಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿಗೆ ಶೇ. 94.55 ಫಲಿತಾಂಶ, ಮಂಗಳೂರು ವಿವಿ ಪದವಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ನ್ಯೂಸ್ ನಾಟೌಟ್: ಮಂಗಳೂರು ವಿಶ್ವವಿದ್ಯಾಲಯ 2024ರ ಜೂನ್ ಮತ್ತು ಜುಲೈನಲ್ಲಿ ನಡೆಸಿದ ಎಲ್ಲಾ ಪದವಿ ಕೋರ್ಸ್‌ಗಳ ದ್ವಿತೀಯ, ಚತುರ್ಥ ಮತ್ತು ಆರನೇ ಸೆಮಿಸ್ಟರ್‌ನ ಪರೀಕ್ಷೆಗಳ ಫಲಿತಾಂಶ ಇತ್ತೀಚೆಗೆ ಪ್ರಕಟಗೊಂಡಿದೆ. ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಅಂತಿಮ ವರ್ಷದ ಪದವಿ ಪರೀಕ್ಷೆಯ ಒಟ್ಟು 5 ವಿಭಾಗಗಳಲ್ಲಿ ಶೇ.94.55 ಫಲಿತಾಂಶ ದಾಖಲಾಗಿದೆ.

ಕಲಾ ವಿಭಾಗದಲ್ಲಿ ಹಾಜರಾದ 18 ವಿದ್ಯಾರ್ಥಿಗಳಲ್ಲಿ 15 ಮಂದಿ ಉತ್ತೀರ್ಣರಾಗಿದ್ದು, 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 5 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ.82.35 ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 71 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಾಗಿದೆ. ಇದರಲ್ಲಿ 46 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಎಲ್ಲರೂ ವಿಶಿಷ್ಟ ಶ್ರೇಣಿಯಲ್ಲಿ ಪಾಸಾಗಿ ಶೇ. 85.71 ಫಲಿತಾಂಶ ದಾಖಲಾಗಿದೆ.

ಸಮಾಜಕಾರ್ಯ ವಿಭಾಗದ 17 ವಿದ್ಯಾರ್ಥಿಗಳಲ್ಲಿ 17 ಮಂದಿಯೂ ಉತ್ತೀರ್ಣರಾಗಿ ಶೇ. 100 ಫಲಿತಾಂಶದೊಂದಿಗೆ 13 ಮಂದಿ ವಿಶಿಷ್ಟ ಶ್ರೇಣಿ ಮತ್ತು 4 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬಿಬಿಎ ವಿಭಾಗದಿಂದ ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 18 ಮಂದಿ ಉತ್ತೀರ್ಣರಾಗಿದ್ದಾರೆ. 14 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 4 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ. 90 ಫಲಿತಾಂಶ ದಾಖಲಾಗಿದೆ.

Related posts

ಕಾರ್ಕಳದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪವರ್ ಶೋ,ಈ ಬಾರಿಯೂ ಕಮಲ ಅರಳಿಸಲು ತಂತ್ರ

ಜ್ಞಾನಗಂಗೆಯನ್ನು ತಂದ ಭಗೀರಥ…

ಗುತ್ತಿಗಾರಿನಲ್ಲಿ ವಿದ್ಯುತ್ ಸಬ್ ಸ್ಟೇಶನ್ ಗೆ ಸಚಿವ ಅಂಗಾರ ಪ್ರಾಯೋಗಿಕ ಚಾಲನೆ