Latestಕೆವಿಜಿ ಕ್ಯಾಂಪಸ್‌

ಸುಳ್ಯ: ಎನ್ನೆಂಸಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ, ಪ್ರತಿಜ್ಞಾವಿಧಿ ಕಾರ್ಯಕ್ರಮ

328
Spread the love

ನ್ಯೂಸ್ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜ್ಞಾನ ವಿಭಾಗದ ಸಂಯೋಜಕರು ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸತ್ಯಪ್ರಕಾಶ್ ಡಿ. ವಹಿಸಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಮಹತ್ವದ ಬಗ್ಗೆ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಉಷಾ ಎಂ.ಪಿ ತಿಳಿಸಿದರು. ಪ್ರತಿಜ್ಞಾವಿಧಿ ಬೋಧನೆಯನ್ನು ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಕ್ಷತಾ ಕೆ. ನಿರ್ವಹಿಸಿದರು. ಕಾಲೇಜಿನ ಉಪನ್ಯಾಸಕ ವರ್ಗ, ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ ಕೆ.ಸಿ ಕಾರ್ಯಕ್ರಮ ನಿರೂಪಿಸಿದರು.

See also  ಮಡಿಕೇರಿ: ಸರ್ಕಾರಿ ಶಾಲೆಯ ಮಕ್ಕಳ ಮೇಲೆ ಹೆಜ್ಜೇನು ನೊಣಗಳ ದಾಳಿ, 19 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು, ಸಿಬ್ಬಂದಿಗೆ ಗಾಯ
  Ad Widget   Ad Widget   Ad Widget   Ad Widget