ಕರಾವಳಿ

ಸುಳ್ಯ: ಎನ್‌ಎಂಸಿಯಲ್ಲಿ ಮಹಿಳಾ ಏಕತಾ ದಿನಾಚರಣೆ, ವಿದ್ಯಾರ್ಥಿಗಳೊಂದಿಗೆ ಸಂವಾದ ವಿಚಾರ ವಿನಿಮಯ

ನ್ಯೂಸ್ ನಾಟೌಟ್: ನೆಹರು ಮೆಮೋರಿಯಲ್ ಕಾಲೇಜು, ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಶುಕ್ರವಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ನೇತೃತ್ವದಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರ ಕುಮಾರ್ ಎಂ ಎಂ ವಹಿಸಿದ್ದರು. ಸುಳ್ಯದ ಸಾಂದೀಪ್ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಣಿ ಸದಾಶಿವ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ತಾವು

ತೆಗೆದುಕೊಳ್ಳಬೇಕಾಗಿರುವ ದಿಟ್ಟ ಹೆಜ್ಜೆಯ ಕುರಿತಾಗಿ ಜಾಗೃತಿ ಮೂಡಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ. ಮಮತಾ ಕೆ ವಂದಿಸಿದರು. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಶೋಭಾ ಎ ಅತಿಥಿ ಪರಿಚಯ ಮಾಡಿಕೊಟ್ಟರು. ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಕೃಪಾ ಎ ಎನ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ನೈತಿಕ ಪೊಲೀಸ್‌ಗಿರಿ ಪ್ರಕರಣ, ಪೊಲೀಸರ ಮಿಂಚಿನ ಕಾರ್ಯಾಚರಣೆ, ಮೂವರ ಬಂಧನ

ಸುಳ್ಯಕ್ಕೆ ಮತ್ತೊಮ್ಮೆ ‘ಬಂಗಾರ’ ಅಂಗಾರರೇ ಫಿಕ್ಸ್‌..? ಕಾಂಗ್ರೆಸ್‌ನಿಂದ ಯಾರಿಗೆ ಟಿಕೆಟ್‌? ಕೊಡಗಿನಲ್ಲೂ ಭಾರೀ ರೇಸ್‌..!

ನಾಯಿ ನುಂಗಿ ಒದ್ದಾಡುತ್ತಿದ್ದ ಬೃಹತ್ ಹೆಬ್ಬಾವಿನ ರಕ್ಷಣೆ, 15 ಅಡಿ ಉದ್ದ, 60 ಕೆ.ಜಿ. ತೂಕವಿದ್ದ ಹೆಬ್ಬಾವು ನಾಯಿ ನುಂಗಿ ಒದ್ದಾಡಿದ್ದು ಹೇಗೆ?