ಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

141

ನ್ಯೂಸ್ ನಾಟೌಟ್: ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಂಘ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರತ್ನಾವತಿ.ಡಿ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ತುಳಸಿ ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಸಂಘಟಕಿ ದಿವ್ಯ ಟಿ.ಎಸ್. ಸ್ವಾಗತಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ಚೈತನ್ಯ ಎಂ.ವಂದಿಸಿ ಅನ್ವಯ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಅಂತಿಮ ಪದವಿಯ ವಿದ್ಯಾರ್ಥಿಗಳಿಂದ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಉಪನ್ಯಾಸಕರಾದ ಶ್ರೀಧರ ವಿ ಹಾಗೂ ಗೀತಾ ಶೆಣೈ ಹಾಗೂ ತರಗತಿ ಪ್ರತಿನಿಧಿಗಳಾದ ಆದಿತ್ಯ ಡಿ.ಕೆ ಲಹರಿ ಕೆ.ಯು. ಹಾಗೂ ವಾಣಿಜ್ಯ ಸಂಘದ ಪ್ರತಿನಿಧಿಗಳಾದ ಕೀರ್ತನ್.ಡಿ ಮತ್ತು ಚೈತನ್ಯ.ಎಂ ಸಹಕರಿಸಿದರು. ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ಕಾಟಕ(ಆಟಿ) ಚಿಕಿತ್ಸೆ- ಮಾನ್ಸೂನ್‌ ಟ್ರೀಟ್ಮೆಂಟ್‌ನ ವಿಶೇಷತೆಗಳೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget