ಕರಾವಳಿಕ್ರೈಂವೈರಲ್ ನ್ಯೂಸ್

ಸುಳ್ಯ : ನಿಯಂತ್ರಣ ಕಳೆದುಕೊಂಡ ಪಿಕಪ್ ವಿದ್ಯುತ್ ಕಂಬಕ್ಕೆ ಡಿಕ್ಕಿ! ಪಿಕಪ್ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ! ಮುಂದೇನಾಯ್ತು..?

ನ್ಯೂಸ್ ನಾಟೌಟ್ : ವಿದ್ಯುತ್ ಕಂಬಕ್ಕೆ ಪಿಕಪ್ ವಾಹನ ಢಿಕ್ಕಿಯಾಗಿ ಕಂಬ ಮುರಿದು ಪಿಕಪ್ ಮೇಲೆ ಬಿದ್ದು, ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಜಾಲ್ಸೂರಿನ ಕದಿಕಡ್ಕದಲ್ಲಿ ಸಮೀಪ ಸಂಭವಿಸಿದೆ.

ಪುತ್ತೂರಿನಿಂದ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ಕದಿಕಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಈ ವೇಳೆ ವಿದ್ಯುತ್ ಕಂಬ ಮುರಿದು ಪಿಕಪ್ ವಾಹನದ ಮೇಲೆ ಬಿದ್ದ ಪರಿಣಾಮ ಕೆಲಕಾಲ ದೊಡ್ಡ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಬಳಿಕ ಸ್ಥಳೀಯರ ಸಹಾಯದಿಂದ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆಂದು ತಿಳಿದುಬಂದಿದೆ.

ಢಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯುತ್ ಕಂಬ ಮುರಿದು ಪಿಕಪ್ ಮೇಲೆ ಬಿದ್ದುದರಿಂದ ಪಿಕಪ್ ನ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂದು ವರದಿ ತಿಳಿಸಿದೆ.

FB PAGE : https://www.facebook.com/NewsNotOut2023

Insta : https://www.instagram.com/newsnotout/

Tweet : https://twitter.com/News_Not_Out

YouTube : https://www.youtube.com/@newsnotout8209

Koo app: https://www.kooapp.com/profile/NewsNotOut

Website : https://newsnotout.com/

Related posts

ಫಾಜಿಲ್ ಹತ್ಯೆ ಪ್ರಕರಣ: ಮೊದಲ ಆರೋಪಿ ಬಂಧನ

ಕೊಡಗು: ಗಾಂಜಾ ಸರಬರಾಜು ಮಾಡುತ್ತಿದ್ದ ಬೆಡ್ ಶೀಟ್ ಮಾರಾಟಗಾರರು ಅರೆಸ್ಟ್..! ಖಾಸಗಿ ಬಸ್ ನಿಲ್ದಾಣದಲ್ಲಿ ಮಾರಾಟ..!

ಇಂದು ಮಧ್ಯರಾತ್ರಿಯಿಂದ ಎರಡು ದಿನ ಮದ್ಯದಂಗಡಿ, ಬಾರ್‌ ಬಂದ್‌..!, ದ.ಕ . ಜಿಲ್ಲಾಧಿಕಾರಿ ಮುಲೈ ಮುಹಿಲನ್‌ ಮಹತ್ವದ ಆದೇಶ