ಕ್ರೈಂ

ಮಾರಣಾಂತಿಕ ಹಲ್ಲೆ ಹಾಗೂ ಜಾತಿ ನಿಂದನೆ: ಇಬ್ಬರನ್ನು ಬಂಧಿಸಿದ ಸುಳ್ಯ ಪೊಲೀಸರು

586
Spread the love

ಸುಳ್ಯ : ಮಾರಣಾಂತಿಕ ಹಲ್ಲೆ ಹಾಗೂ ಜಾತಿ ನಿಂದನೆ ಮಾಡಿರುವ ಘಟನೆ ತಾಲೂಕಿನ ತೊಡಿಕಾನದಲ್ಲಿ ನಡೆದಿದೆ. ಈ ಬಗ್ಗೆ ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 8 ರಂದು ಸಂಜೆ 5.30 ರ ಸುಮಾರಿಗೆ ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿಯಾದ ಕೃಷ್ಣ ಎನ್. ಎಂಬ ಯುವಕನಿಗೆ ತೊಡಿಕಾನ ನಿವಾಸಿಗಳಾದ ಪ್ರದೀಪ್ ಮತ್ತು ದಾಮೋದರ ಎಂಬವರು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಹಲ್ಲೆಗೊಳಗಾದ ಯುವಕ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ದೂರು ನೀಡಿದ ಮೇರೆಗೆ ಸುಳ್ಯ ಠಾಣೆಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಹಾಗೂ ತಾಲೂಕು ಅಧ್ಯಕ್ಷ ಮೋಹನ್ ಕುಮಾರ್ ಅಡ್ಕಬಳೆ ಪೊಲೀಸ್ ಠಾಣೆಗೆ ತೆರಳಿ, ಹೊಡೆದವರ ಮೇಲೆ ಎಫ್‌ಐಆರ್ ದಾಖಲಿಸುವಂತೆ ವಿನಂತಿಸಿಕೊಂಡಿದ್ದರು. ಸುಳ್ಯ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪೋಲಿಸರು ಆರೋಪಿ ಗಳನ್ನು ಬಂಧಿಸಿದ್ದಾರೆ.

See also  ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಮರ ಕಡಿಯುವಾಗ ಅವಘಡ, ವ್ಯಕ್ತಿ ದಾರುಣ ಸಾವು
  Ad Widget   Ad Widget   Ad Widget   Ad Widget   Ad Widget   Ad Widget