ನ್ಯೂಸ್ ನಾಟೌಟ್: ಕಲ್ಲುಗುಂಡಿಯ ಚಟ್ಟೆಕಲ್ಲು ಬಳಿಯ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆರೋಪಿ ಬರೋಬ್ಬರಿ ಮೂರು ವರ್ಷದ ಬಳಿಕ ಪೊಲೀಸರ ಅತಿಥಿಯಾಗಿದ್ದಾನೆ.
ದಿನಾಂಕ 20.03.2022 ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ರೂ 1,50,000/- ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ, ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂಬಾತನನ್ನು, ಸುಳ್ಯ ಠಾಣಾ ಪೊಲೀಸರು ದಿನಾಂಕ:04.07.2025 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.