ಕರಾವಳಿ

ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಕ್ಷಣಗಣನೆ, NIA ಡೆಡ್‌ಲೈನ್‌ ಕೊಟ್ರೂ ಶರಣಾಗದ ಹಿನ್ನೆಲೆ, ಹೇಗೆ ನಡೆಯುತ್ತೆ ಆಸ್ತಿ ಮುಟ್ಟುಗೋಲು?

ನ್ಯೂಸ್ ನಾಟೌಟ್: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಗಳಿಗೆ ಶರಣಾಗುವಂತೆ NIA ಕೊಟ್ಟ ಡೆಡ್‌ಲೈನ್ ಮುಕ್ತಾಯಗೊಂಡಿದೆ. ಆದರೂ ಆರೋಪಿಗಳು ಇದುವರೆಗೆ ಶರಣಾಗಿಲ್ಲದ ಕಾರಣಕ್ಕೆ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ NIA ಮುಂದಾಗಿದೆ ಎಂದು ತಿಳಿದು ಬಂದಿದೆ.

ಆಸ್ತಿ ಮುಟ್ಟುಗೋಲು ಎಚ್ಚರಿಕೆಗೂ ಬಗ್ಗದ ಆರೋಪಿಗಳು

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30ರೊಳಗೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಲಾಗಿತ್ತು. ಅಲ್ಲದೆ ಆರೋಪಿಗಳ ಮನೆ ಬಾಗಿಲಿಗೆ ಭಿತ್ತಿಪತ್ರ ಅಂಟಿಸುವ ಮೂಲಕ ಗಡುವು ನೀಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳು ಇದುವರೆಗೆ ಶರಣಾಗಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ NIA ಆಸ್ತಿ ಜಪ್ತಿ ಮಾಡುವುದಕ್ಕೆ ಮುಂದಾಗಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಜಪ್ತಿ ಮಾಡಬಹುದು. ಆದರೆ ಇದರ ಸ್ವಲ್ಪ ಸಮಯ ಬೇಕಾಗಬಹುದು ಎಂದು ಹೇಳಲಾಗುತ್ತಿದೆ. ಮೊದಲನೆಯದಾಗಿ NIA ಅಧಿಕಾರಿಗಳು ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸಲಾಗುತ್ತದೆ. ಬಳಿಕ ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ನಂತರ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಬಹುದು ಎಂದು ಹೇಳಲಾಗುತ್ತಿದೆ.

Related posts

ಕಲ್ಲುಗುಂಡಿ : ಅಮ್ಮನ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ (ನಿ ) ಸಾಲ ಸೌಲಭ್ಯ ಮತ್ತು ಠೇವಣಿ ಸಂಗ್ರಹ

ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ, ಅನರ್ಹರನ್ನು APLಗೆ ವರ್ಗಾಯಿಸಲಾಗುತ್ತದೆ ಎಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದಕ್ಕೆ ದ್ವಿಚಕ್ರ ವಾಹನ ಪುಡಿಗೈದ ದುಷ್ಕರ್ಮಿಗಳು!