ಕರಾವಳಿಸುಳ್ಯ

ಸುಳ್ಯ: ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಗಣರಾಜ್ಯೋತ್ಸವದ ಸಂಭ್ರಮ

ನ್ಯೂಸ್‌ ನಾಟೌಟ್‌: ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪೇರಾಲ್, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ಎನ್.ಎಸ್.ಎಸ್., ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಆರ್ತಿಕ್ ಕೆ. ಎಸ್., ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು. ಶ್ರೀಜಾ ರೈ, ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಚಪ್ಪಲಿ ಕಳೆದುಹೋಗಿದೆಯೆಂದು 112ಗೆ ಕರೆ ಮಾಡಿದ ಯುವಕ..!,ಸ್ಥಳಕ್ಕಾಗಮಿಸಿದ ಪೊಲೀಸರು..ಮುಂದೆನಾಯ್ತು?

ಸಂಪಾಜೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ 2ನೇ ಬಲಿ, ದೀಪಾವಳಿ ಸಂಭ್ರಮದಲ್ಲಿರುವಾಗಲೇ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕುಸಿದು ಬಿದ್ದು ಸಾವು

ಸುಳ್ಯ: ವಿದ್ಯಾರ್ಥಿಗಳೇ ನಿಮಗಿದೋ ಸುವರ್ಣಾವಕಾಶ..!,ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯ ಉಚಿತ ತರಬೇತಿ ಕಾರ್ಯಾಗಾರಕ್ಕೆ ನೋಂದಣಿ ಆರಂಭ..!