
ಸುಳ್ಯ: ಕೇಂದ್ರ ಕೃಷಿ ಹಾಗೂ ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಸುಳ್ಯಕ್ಕೆ ಆಗಮಿಸಿದ್ದು ಅವರನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಇಲ್ಲಿಯ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಬಿಜೆಪಿ ರಾಜ್ಯ ಮೋರ್ಚ ಉಪಾಧ್ಯಕ್ಷ ಎ.ವಿ ತೀರ್ಥರಾಮ,ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಕಾರ್ಯಕಾರಣಿ ಸಮಿತಿ ಸದಸ್ಯೆ ಭಾಗೀರಥಿ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಂಬೆ ,ನಗರ ಪಂಚಾಯತ್ ಅಧ್ಯಕ್ಷ ವಿನಿಯಕುಮಾರ್ ಕಂದಡ್ಕ,ಬಿಜೆಪಿ ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಗುರುದತ್ತ್ ನಾಯಕ್,ಜಿಲ್ಲಾ ಬಿಜೆಪಿ ರೈತ ಮೋರ್ಚ ಜಿಲ್ಲಾ ಅಧ್ಯಕ್ಷ ರಾಧಕ್ರಷ್ಣ ಬೊಳ್ಳುರು,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ,ರಾಕೇಶ್ ರೈ ಕೆಡೆಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.