ನ್ಯೂಸ್ ನಾಟೌಟ್: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ವಾರಪತ್ರಿಕೆ ಕರುನಾಡ ನಿಧಿಯ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ (ಎ.5) ಆಯೋಜಿಸಿದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಬಹುಮುಖ ಪ್ರತಿಭೆ ಸೋನಾ ಅಡ್ಕಾರ್ ಅವರಿಗೆ ಕರುನಾಡ ನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಳಿಕ ಬೆಂಗಳೂರಿನ ಬಯಲು ರಂಗಮಂದಿರದಲ್ಲಿ ಲಲಿತಾ ಕಲಾ ಅಕಾಡೆಮಿ (ರಿ) ಆಯೋಜಿಸಿದ ರಂಗ ಸಂಭ್ರಮ -2025 ಕಾರ್ಯಕ್ರಮದಲ್ಲಿ ಎನ್. ಸಂತೋಷ್ ಹೆಗ್ಡೆ ( ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಾಧೀಶರು, ನಿವೃತ್ತ ಲೋಕಾಯುಕ್ತರು) , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಎಂ. ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತ್ ರಾಯ್ ಪಾಟೀಲ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಕೆ.ವಿ. ನಟರಾಜ್ ಮೂರ್ತಿ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಈ ಸಂದರ್ಭ ಸೋನಾ ಅಡ್ಕಾರ್ ಅವಳ ಬಹುಮುಖ ಪ್ರತಿಭೆ ಗುರುತಿಸಿ ಕವಿ ಚಕ್ರವರ್ತಿ ಪಂಪ ಸದ್ಭಾವನಾ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಸೋನಾ ಅಡ್ಕಾರ್ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ. ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್ ಅಡ್ಕಾರ್ ಅವರ ಪುತ್ರಿ.