ಕ್ರೀಡೆ/ಸಿನಿಮಾಶಿಕ್ಷಣಸಾಧಕರ ವೇದಿಕೆಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ, ಅತ್ಯುತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳು

191

ನ್ಯೂಸ್ ನಾಟೌಟ್ : ಡಿ 9ರಂದು ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಅದ್ದೂರಿಯಾಗಿ ನಡೆಯಿತು. ವಿದ್ಯಾರ್ಥಿಗಳು ಈ ಕೂಟದಲ್ಲಿ ಅತ್ಯುತ್ಸಾಹ ಸಂಭ್ರಮದಿಂದ ಪಾಲ್ಗೊಂಡರು. ಕೂಟದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮಿಥಾಲಿ ಪಿ ರೈ ಅವರು ವಹಿಸಿಕೊಂಡಿದ್ದರು.

ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ.ಆರ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ಎಒಎಲ್ ಇ (ರಿ) ಸುಳ್ಯ ಇದರ ಕಾರ್ಯದರ್ಶಿ ಹೇಮನಾಥ್ ಕೆ.ವಿ ಕ್ರೀಡಾ ಜ್ಯೋತಿ ಸ್ವೀಕರಿಸಿ ದೀಪ ಬೆಳಗಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಂಶುಪಾಲ ಪ್ರೊ ಎಂ ಎಂ ರುದ್ರಕುಮಾರ್, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಉಪಸ್ಥಿತರಿದ್ದರು.

ಪದವಿ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕ ಲೆಫ್ಟಿನೆಂಟ್ ಸೀತಾರಾಮ ಎಂ.ಡಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ದೈಹಿಕ ಶಿಕ್ಷಣ ನಿರ್ದೇಶಕ ಮಿಥನ್ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಭಿಷೇಕ್ ಎಂ,ಯಶಸ್,ಜೀವಿತ್ ಕುಮಾರ್ ಪ್ರಾರ್ಥಿಸಿದರು.ಉಪನ್ಯಾಸಕಿ ಸಾವಿತ್ರಿ ಕೆ ಸ್ವಾಗತಿಸಿದರು.

ಕ್ರೀಡಾ ಕಾರ್ಯದರ್ಶಿ ಅಬ್ದುಲ್ ರೌಫ್ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್ ಸಿ ಸಿ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ನೊಂದಿಗೆ ವಿದ್ಯಾರ್ಥಿಗಳ ಪಥ ಸಂಚಲನ ನಡೆಯಿತು. ಉಪನ್ಯಾಸಕರಾದ ಬೇಬಿ ವಿದ್ಯಾ ಪಿ.ಬಿ., ಪ್ರೇಮಲತಾ ಎ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ನಾಯಕ ಅಕ್ಷಯ್ ರೈ ವಂದಿಸಿದರು.

See also  ಸುಳ್ಯ-ಆಲೆಟ್ಟಿ: ಮೂರು ದಿನವಾದರೂ ಸಿಕ್ಕಿಲ್ಲ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರ್ಮಿಕ, ರಭಸದಿಂದ ಹರಿಯುವ ನೀರನ್ನು ಲೆಕ್ಕಿಸದೆ ಕಾರ್ಯಾಚರಣೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget