ಕರಾವಳಿಕ್ರೈಂ

ಸುಳ್ಯ: ಬೈಕ್ ನಲ್ಲಿ ಬರುತ್ತಿದ್ದ ವೈದ್ಯ ವಿದ್ಯಾರ್ಥಿಗೆ ಗುದ್ದಿ ಕಾರು ಸಹಿತ ಚಾಲಕ ಪರಾರಿ..! ಕನಕಮಜಲಿನಲ್ಲಿ ಹಿಟ್ ಆ್ಯಂಡ್ ರನ್ ಕೇಸ್..!

269

ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಅಪಾಯಕಾರಿ ವಾಹನ ಚಾಲಕರ ಸಂಖ್ಯೆ ಹೆಚ್ಚಾಗುತ್ತಿದೆ. ಯದ್ವಾತದ್ವಾ ಗಾಡಿ ಓಡಿಸುವ ಮೂಲಕ ರಸ್ತೆಯಲ್ಲಿ ಸಂಚರಿಸುವ ಅಮಾಯಕರ ಜೀವಕ್ಕೆ ಕುತ್ತು ತರುತ್ತಿದ್ದಾರೆ. ಅಂತಹ ಒಂದು ಘಟನೆ ಸುಳ್ಯದ ಕನಕಮಜಲಿನ ಸಮೀಪ ನಡೆದಿದೆ. ಬೈಕ್ ನಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೈದ್ಯ ವಿದ್ಯಾರ್ಥಿಗೆ ಕಾರು ಚಾಲಕನೊಬ್ಬ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ.

ವೈದ್ಯ ವಿದ್ಯಾರ್ಥಿ ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದರು. ವಿರುದ್ಧ ದಿಕ್ಕಿನಿಂದ ಅಂದರೆ ಸುಳ್ಯದಿಂದ ಪುತ್ತೂರಿಗೆ ಹೋಗುತ್ತಿದ್ದ ಕಾರು ರಭಸದಿಂದ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಕಾಲಿಗೆ ಬಲವಾದ ಏಟು ಬಿದ್ದಿದೆ. ಸದ್ಯ ಆತನನ್ನು ಸುಳ್ಯದ ಆಸ್ಪತ್ರೆಯಿಂದ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

See also  ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮೈಸೂರು ಮಾನಸಗಂಗೋತ್ರಿ ಪ್ರೊಫೆಸರ್ ಭಾಗಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget