ಕರಾವಳಿ

ಸುಳ್ಯ: ಎರಡನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ನ್ಯೂಸ್ ನಾಟೌಟ್: ಇನ್ನೂ ಜೀವನ ಕಾಣಬೇಕಿದ್ದ ಎಳೆಯ ಮಗು ಎರಡನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಿಂದ ವರದಿಯಾಗಿದೆ.

ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್‌ ಕೆ.ಸಿ.(7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದಾನೆ. ಸಕ್ರಿಯವಾಗಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾನೆ. ಆದರೆ ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದಾನೆ. ತತ್‌ಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು. ಮೃತ ಬಾಲಕ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Related posts

ಸುಳ್ಯದ ಖ್ಯಾತ ಉದ್ಯಮಿಯ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!,ನಾಲ್ಕು ಪುಟಗಳ ಡೆತ್‌ನೋಟ್‌ ಪತ್ತೆ,ಐವರು ಅರೆಸ್ಟ್..!

ಮಂಗಳೂರಲ್ಲಿ ಕಾರು-ಸ್ಕೂಟರ್‌ ಭೀಕರ ಅಪಘಾತ

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನ ಘಟ್ಟದಲ್ಲಿ ಮೊಸಳೆ ಪ್ರತ್ಯಕ್ಷ..! ಮೊಸಳೆಗಳಿದ್ದರೂ ನೀರಿಗಿಳಿಯಲು ಹಠ ಮಾಡುತ್ತಿರುವ ಭಕ್ತರು..!