ಕರಾವಳಿಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ: 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ, ತಡರಾತ್ರಿ ಮನೆಗೆ ನುಗ್ಗಿದ ಯುವಕ

161

ನ್ಯೂಸ್ ನಾಟೌಟ್: ಸುಳ್ಯದ ಮಂಡೆಕೋಲಿನಲ್ಲಿ ತಡರಾತ್ರಿ ಯುವಕನೊಬ್ಬ 10 ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ವರದಿಯಾಗಿದೆ. ಸದ್ಯ ಪೋಕ್ಸೋ ಕಾಯಿದೆಯಡಿ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ನಿನ್ನೆ (ಮಾ13) ತಡರಾತ್ರಿ ಒಂದು ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯುವತಿಯ ಮನೆಯೊಳಗೆ ಪ್ರವೇಶಿಸಿ ಕೃತ್ಯ ಎಸಗಿದ್ದಾನೆ. ಈ ವೇಳೆ ಯುವತಿ ಬೊಬ್ಬೆ ಹೊಡೆದುದರಿಂದ ಮನೆಯವರೆಲ್ಲ ಎಚ್ಚರಿಕೆಯಾಗಿ ಯುವತಿಯ ಕೊಠಡಿಗೆ ಬಂದಾಗ ವಿಚಾರ ಬೆಳಕಿಗೆ ಬಂದಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  16ರ ಬಾಲಕಿಯನ್ನು ಭೇಟಿಯಾಗಲು ಬಂದಿದ್ದ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಜನ..! ವಿಡಿಯೋ ವೈರಲ್ ಆಗುತ್ತಿದ್ದಂತೆ ಐವರು ಅರೆಸ್ಟ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget