ನ್ಯೂಸ್ ನಾಟೌಟ್: ಪುತ್ತೂರಿನ ಸೆಂಟಿಯಾರ್(Santyar) ನಲ್ಲಿ ಪೈಚಾರಿನ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾದ ಘಟನೆ ಇಂದು(ಮಾ.30) ನಡೆದಿದೆ.
ಸುಳ್ಯದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ತಿರುವಿನಲ್ಲಿ ಆಳವಾದ ಗುಂಡಿಗೆ ಬಿದ್ದಿದೆ. ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಸ್ಥಳದಲ್ಲಿ ಜನ ಜಮಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.