ಕ್ರೈಂ

ಸುಳ್ಯ: ನಡೆದುಕೊಂಡು ಬರುತ್ತಿದ್ದ ಮಹಿಳೆ ಹೃದಯಾಘಾತದಿಂದ ಸಾವು

649

ಸುಳ್ಯ: ಪೇಟೆಗೆ ನಡೆದುಕೊಂಡು ಬರುತ್ತಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.

ಮೃತರನ್ನು ಸುಳ್ಯ ಜಟ್ಟಿಪಳ್ಳ ಕಟ್ಟೆ ಬಳಿ ನಿವಾಸಿ ಪದ್ಮಾವತಿ (55) ಎಂದು ಗುರುತಿಸಲಾಗಿದೆ. ಮನೆಯಿಂದ ಸುಳ್ಯಕ್ಕೆ ನಡೆದುಕೊಂಡು ಬರುತ್ತಿರುವ ಸಂದರ್ಭದಲ್ಲಿ ಜಟ್ಟಿಪಳ್ಳ ಅಂಗನವಾಡಿ ಬಳಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪದ್ಮಾವತಿಯವರು ಕುಸಿದು ಬೀಳುತ್ತಿದ್ದಂತೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಬದುಕಿಸುವ ಪ್ರಯತ್ನ ನಡೆಸಿದರು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಕುಸಿದು ಬಿದ್ದವರನ್ನು ಊರವರು ಸೇರಿ ಸುಳ್ಯ ಸರಕಾರಿ ಆಸ್ಪತ್ರೆ ಗೆ ಕೊಂಡೊಯ್ದರಾದರೂ ಆ ವೇಳೆ ಅವರು ಮೃತಪಟ್ಟಿದ್ದರು.

See also  ಸಂಸದ ಪ್ರತಾಪ್‌ಸಿಂಹ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಹೆಡ್ ಕಾನ್‌ಸ್ಟೆಬಲ್​ ಅಮಾನತು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget