ಕರಾವಳಿಸುಳ್ಯ

ಸುಳ್ಯ:ಎನ್ನೆಂಸಿ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ‘ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ’, ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿಗಳು, ಗ್ರಾಹಕರ ಸಂರಕ್ಷಣಾ ಕಾಯಿದೆ’ ಕುರಿತು ಮಾಹಿತಿ

ನ್ಯೂಸ್ ನಾಟೌಟ್: ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕುರಿತಾಗಿ ಮಾಹಿತಿ ಕಾರ್ಯಕ್ರಮ ಮಾರ್ಚ್ 15 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸುಳ್ಯದ ಯುವ ನ್ಯಾಯವಾದಿ ಶ್ರೀಹರಿ ಕುಕ್ಕುಡೇಲು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ‘ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿಗಳು, ಗ್ರಾಹಕರ ಸಂರಕ್ಷಣಾ ಕಾಯಿದೆ’ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ. ಎಂ. ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀಮತಿ ರತ್ನಾವತಿ.ಡಿ, ಐಕ್ಯೂಎಸಿ ಸಂಯೋಜಕಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಮಮತಾ ಕೆ ಉಪಸ್ಥಿತರಿದ್ದರು. ವಾಣಿಜ್ಯ ಸಂಘದ ಸಂಯೋಜಕಿ ದಿವ್ಯ ಟಿ ಎಸ್ ಸ್ವಾಗತಿಸಿದರು. ಅಂತಿಮ ವಾಣಿಜ್ಯ ಪದವಿಯ ವಿದ್ಯಾರ್ಥಿನಿ ಕು. ಸೋನಿಕಾ ವಂದಿಸಿದರು. ಪದ್ಮಶ್ರೀ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ್ ವಿ, ಗೀತಾ ಶೆಣೈ, ಉಪಸ್ಥಿತರಿದ್ದರು. ವಾಣಿಜ್ಯ ಪದವಿ ವಿದ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು.

Related posts

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ, ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ನಟಿಯ ಮನೆಗೆ ಬಂದ ಪುಟ್ಟಗೌರಿ

ಮಂಗಳೂರು : ಜೂ. 20 ರಂದು ಶುಭಾರಂಭಗೊಳ್ಳಲಿದೆ ನೂತನ ಮಳಿಗೆ ” ಕರ್ನಾಟಕ ಟ್ರೇಡರ್‍ಸ್”

‘ಜಸ್ಟ್ ಅರ್ಥ ಮಾಡ್ಕೊಳ್ಳಿ ಪ್ಲೀಸ್’, ಬನ್ನಿ ನಮ್ಮ ಪವರ್ ಮ್ಯಾನ್ ಗಳಿಗೆ ಸಾಥ್ ಕೊಡೋಣ