ಕರಾವಳಿಸುಳ್ಯ

ಸುಳ್ಯ: ಕಳೆದೆರಡು ದಿನಗಳಿಂದ ನಾಪತ್ತೆಯಾದ ಬಾಲಕ ಮೈಸೂರಿನಲ್ಲಿ ಪತ್ತೆ,ಈ ಘಟನೆ ನಡೆದಿದ್ದೇಗೆ?

227

ನ್ಯೂಸ್ ನಾಟೌಟ್: ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ಹೇಳಿ ಹೋದ ಸುಳ್ಯ ಮೂಲದ ಬಾಲಕ ನಾಪತ್ತೆಯಾಗಿದ್ದ ಘಟನೆ ನಡೆದಿತ್ತು. ಇದೀಗ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರಂದು ನಾಪತ್ತೆಯಾಗಿದ್ದ. ಈತ ಎಂಟನೇ ತರಗತಿಯಲ್ಲಿ ಓದುತ್ತಿದ್ದು, ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತ್ತಿದ್ದ. ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಮನೆಗೆ ಬಂದಿರಲಿಲ್ಲ.ಈ ಬಗ್ಗೆ ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದರು. ಶನಿವಾರ ಸಂಜೆ ಮೈಸೂರು ಝೂ ಸಮೀಪ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.ಬಳಿಕ ಪೊಲೀಸರು ಫೋನ್ ಮುಖಾಂತರ ಮನೆಯವರಿಗೆ ತಿಳಿಸಿದ್ದಾರೆ. ಮನೆಯವರು ರಾತ್ರಿ ಮೈಸೂರಿಗೆ ಹೋಗಿ ಇಂದು ಬೆಳಿಗ್ಗೆ ವಿದ್ಯಾರ್ಥಿಯನ್ನು ಕುಂಡಡ್ಕ ಮನೆಗೆ ಕರೆದುಕೊಂಡು ಬಂದಿರುವುದಾಗಿ ತಿಳಿದು ಬಂದಿದೆ.

See also  ಬ್ರೈನ್ ಎಮರೇಜ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ರಿಕ್ಷಾ ಚಾಲಕ, ಚಿಕಿತ್ಸೆ ಫಲಿಸದೆ ಸಾವು
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget