ಕರಾವಳಿಸುಳ್ಯ

ಸುಳ್ಯ: ಕೊಡಗಿನ ನೆಲ್ಯಹುದಿಕೇರಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ

236

ನ್ಯೂಸ್ ನಾಟೌಟ್: ಕೆವಿಜಿ ಮಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಇದರ ಜಂಟಿ ಆಶ್ರಯದೊಂದಿಗೆ ಒಂದು ದಿನದ ಬೃಹತ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ನಡೆಯಿತು.ಕೊಡಗಿನ ನೆಲ್ಯಹುದಿಕೇರಿಯಲ್ಲಿ ಈ ಶಿಬಿರ ನೆರವೇರಿತು.ಶ್ರೀವಿನಾಯಕ ಮಿತ್ರ ಮಂಡಳಿ 40 ಎಕ್ರೆ ನೆಲ್ಯ ಹುದಿಕೇರಿ ಕೊಡಗು ಹಾಗೂ ಡಾ| ಉದಯ ಕುಮಾರ್, ಸ್ವರ್ಣ ಕ್ಲಿನಿಕ್ ನೆಲ್ಯ ಹುದಿಕೇರಿ ಇವರ ಸಹಯೋಗದೊಂದಿಗೆ ಈ ಶಿಬಿರ ನಡೆಯಿತು.

ಶಿಬಿರದ ಉದ್ಘಾಟನೆಯನ್ನು ಡಾ| ಉದಯ ಕುಮಾರ್ ನೆರವೇರಿಸಿದರು.ಈ ವೇಳೆ ವೇದಿಕೆಯಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆರ್ಥೋಪೆಡಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ| ರಂಗನಾಥ್ ಮತ್ತು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹ ಪ್ರಾಧ್ಯಾಪಕರಾದ ಡಾ| ವಿನಯ್ ಭಾರದ್ವಾಜ್ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಆಸ್ಪತ್ರೆಯ ನುರಿತ ವೈದ್ಯರು, ಕಲಿಕಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಬಳಗ ಪಾಲ್ಗೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.

See also  ಕೊರಗಜ್ಜನ ಕಾಣಿಕೆ ಹುಂಡಿಗೆ ಮದ್ಯದ ಬಾಟಲಿ ಎಸೆದ ಕಿಡಿಗೇಡಿಗಳು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget