ನ್ಯೂಸ್ ನಾಟೌಟ್ :ಪಂಜದ ಸಾಮಾಜಿಕ, ಧಾರ್ಮಿಕ ಧುರೀಣ ಡಾ. ದೇವಿಪ್ರಸಾದ್ ಕಾನತ್ತೂರ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.ಇಂದು ಸುಳ್ಯದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಅವರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಡಾ.ದೇವಿಪ್ರಸಾದ್ ಕಾನತ್ತೂರ್ ಅವರು ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಗುರುತಿಸಿ ಅನೇಕ ಪ್ರಶಸ್ತಿಗಳು ಇವರನ್ನರಸಿ ಬಂದಿವೆ. ಚೆನ್ನೈಯ ನ್ಯಾಶನಲ್ ವರ್ಚ್ಯುವಲ್ ಯುನಿವರ್ಸಿಟಿ ಫಾರ್ ಪೀಸ್ ಎಜುಕೇಶನ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ದೇವಿಪ್ರಸಾದ್ ಕಾನತ್ತೂರು ಅವರ ಸಾಧನೆಯ ಮುಡಿಗೆ ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ, ಸೌರಭ ರತ್ನ ರಾಜ್ಯ ಪ್ರಶಸ್ತಿಗಳು ಗರಿಯನ್ನು ಮೂಡಿಸಿದ್ದವು.