ಕರಾವಳಿಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿ(NMC)ನಲ್ಲಿ ಶೈಕ್ಷಣಿಕ ಅಭಿವಿನ್ಯಾಸ ಕಾರ್ಯಕ್ರಮ, ಬಿಸಿಎ ನೂತನ ಪದವಿ ಕೋರ್ಸ್ ಆರಂಭ

ನ್ಯೂಸ್ ನಾಟೌಟ್ : ನೆಹರೂ ಮೋರಿಯಲ್ ಕಾಲೇಜಿನಲ್ಲಿ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆದುಕೊಂಡ ನೂತನ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಅಭಿವಿನ್ಯಾಸ ಮತ್ತು ಬಿಸಿಎ ನೂತನ ಪದವಿ ಕೋರ್ಸ್ ಉದ್ಘಾಟನಾ ಕಾರ್ಯಕ್ರಮವನ್ನು ಅಗಸ್ಟ್ 23ನೇ ಬುಧವಾರದಂದು ಹಮ್ಮಿಕೊಳ್ಳಲಾಯಿತು.

ಕಾಲೇಜಿನಲ್ಲಿ ನೂತನವಾಗಿ ಆರಂಭಗೊಂಡ ಬಿಸಿಎ ಪದವಿ ಕೋರ್ಸ್ ಮತ್ತು ಶೈಕ್ಷಣಿಕ ಅಭಿವಿನ್ಯಾಸ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ರಿ. ಉಪಾಧ್ಯಕ್ಷೆ ಶೋಭಾ ಚಿದಾನಂದ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು “ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ದಿನಗಳಲ್ಲಿ ಕಂಪ್ಯೂಟರ್ ಸಂಬಂಧಿತ ಜ್ಞಾನ ಅವಶ್ಯಕವಾದುದು. ತಾಂತ್ರಿಕತೆಯನ್ನು ಉತ್ತಮ ವಿಚಾರಗಳಿಗೆ ಬಳಸಿಕೊಂಡು ತಮ್ಮ ಜೀವನದಲ್ಲಿ ಸಾಧನೆ ಮಾಡುವಂತೆ” ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ರಿ. ಅಧ್ಯಕ್ಷ ಡಾ. ಕೆ.ವಿ. ಚಿದಾನಂದರವರು ಮಾತನಾಡಿ “ಕಾಲೇಜು ಒದಗಿಸುತ್ತಿರುವ ಅತ್ಯುತ್ತಮ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭ ಕಾಲೇಜಿಗೆ ನೂತನ ಪ್ರವೇಶಾತಿ ಪಡೆದ ವಿದ್ಯಾರ್ಥಿನಿ ಅಕ್ಷತಾ ಮತ್ತು ಪೋಷಕರೋರ್ವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಎಒಎಲ್‌ಇ ಕಾರ್ಯದರ್ಶಿ ಹೇಮನಾಥ್ ಕುರುಂಜಿ, ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಬಾಲಚಂದ್ರ ಗೌಡ ಎಂ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಕೆ.ಟಿ. ವಿಶ್ವನಾಥ, ಕಾಲೇಜು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಿನ್ನಪ್ಪ ಗೌಡ ಉಪಸ್ಥಿತರಿದ್ದರು.

ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ. ಮಮತಾ ಕೆ. ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರುದ್ರ ಕುಮಾರ್ ಎಂ. ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ.ವಂದಿಸಿದರು. ಉಪನ್ಯಾಸಕರಾದ ಕೃಪಾ ಎ.ಎನ್ ಮತ್ತು ಕುಲದೀಪ್ ಪೆಲ್ತಡ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಆಲಿಕಲ್ಲು ಸಹಿತ ಮಳೆ,ಸುಳ್ಯದಲ್ಲಿ ಹನಿಮಳೆ

ಸಿಎಂ ಸಿದ್ದರಾಮಯ್ಯ ಬಗ್ಗೆ ಸುಳ್ಳು ಆರೋಪ ಮಾಡಿದ ಶಾಸಕ ಹರೀಶ್ ಪೂಂಜ ವಿರುದ್ಧ ದೂರು

ಮಡಿಕೇರಿ:ಅಪ್ರಾಪ್ತ ಹಿಂದೂ ಹುಡುಗಿಯರ ಅಪಹರಿಸಿದ ಯುವಕರ ಗ್ಯಾಂಗ್..!,ನಾಲ್ವರು ಅರೆಸ್ಟ್,ಮುಂದುವರಿದ ತನಿಖೆ