ಕರಾವಳಿ

ಸುಳ್ಯ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿಯಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ;ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸಾಗರ

210

ನ್ಯೂಸ್ ನಾಟೌಟ್ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ‌ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯುವ ಗಾಂಧಿ ಸ್ಮೃತಿ ಜನಜಾಗೃತಿ ಜಾಥಾಕ್ಕೆ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ಚಾಲನೆ ದೊರೆತಿದೆ.

ಸುಳ್ಯದ ಅಮರಶ್ರೀಭಾಗ್ ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಹಿಳೆಯರು ಪುರುಷರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು, ತಾಲೂಕು ಪದಾಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡರು.ಈ ಅದ್ದೂರಿ ಜಾಥಾ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ಅಮರಶ್ರೀಭಾಗ್ ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನಕ್ಕೆ ತಲುಪಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ಧರ್ಮಾಧಿಕಾರಿಯವರ ಕಲ್ಪನೆಯಲ್ಲಿ ಗಾಂಧೀಜಿಯವರ ಜನ್ಮ ದಿನಾಚರಣೆ ಪ್ರಯುಕ್ತ ವಿಶೇಷವಾಗಿ ಗಾಂಧಿವೃತ್ತ ಕಾರ್ಯಕ್ರಮಗಳನ್ನು ಆಯೋಜಿಸಿ ಮದ್ಯಮುಕ್ತ ಸಮಾಜ ನಿರ್ಮಾಣಕ್ಕೆ ಗಾಂಧಿ ವಿಚಾರ ಧಾರೆಗಳನ್ನು ತಿಳಿಯಪಡಿಸುವ ಕಾರ್ಯಾಗಾರ, ಜನಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮ, ಪಾನಮುಕ್ತರ ಸಮಾವೇಶ, ಮಹಿಳಾ ಸಮಾವೇಶಗಳನ್ನು ಹಮ್ಮಿಕೊಂಡು ವ್ಯಾಪಕ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಲಾಗಿದೆ.

See also  ಮರಳು ಮಾಫಿಯಾಕ್ಕೆ ಬಿಸಿ ಮುಟ್ಟಿಸಿದ ಪೊಲೀಸರು; ಟಿಪ್ಪರ್, ಮರಳು ವಶ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget