ನ್ಯೂಸ್ ನಾಟೌಟ್: ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್.ವತಿಯಿಂದ 40ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು.ನೂತನ ವಿಸ್ತೃತ ಕಟ್ಟಡವನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು.
ಈ ವೇಳೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ,ಎಂ.ಆರ್.ಪಿ.ಎಲ್ ಜನರಲ್ ಮ್ಯಾನೇಜರ್ ಸತೀಶ್ ಆಲೆಟ್ಟಿ, ಸುಳ್ಯ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ ಉಪಸ್ಥಿತರಿದ್ದರು.
ದ.ಕ.ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಸ್ವಾಗತಿಸಿದರು. ಕಾರ್ಯದರ್ಶಿ ಡಾ.ರೇವತಿ ನಂದನ್, ಕೋಶಾಧಿಕಾರಿ ಮಾಧವ ಗೌಡ ಕಾಮಧೇನು ಹಾಗೂ ಪದಾಧಿಕಾರಿಗಳು, ಸಂಸ್ಥೆಯ ಮುಖ್ಯಸ್ಥರಾದ ದಯಾಮಣಿ ಕೆ. ಮತ್ತು ಭಾರತಿ ಪಿ. ಮೊದಲಾದವರು ಉಪಸ್ಥಿತರಿದ್ದರು.