ನ್ಯೂಸ್ ನಾಟೌಟ್ :ಕೆ ವಿ ಜಿ ಕಾನೂನು ಮಹಾವಿದ್ಯಾಲಯದಲ್ಲಿ ಕಳೆದ 28 ವರ್ಷಗಳಿಂದ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ. ಜಯರಾಮ್ ವೈ ರವರು ಸೇವೆಯಿಂದ ವಯೋನಿವೃತ್ತಿ ಹೊಂದಿದ್ದು, ಆ.13ರಂದು ಬೀಳ್ಕೊಡುಗೆ ಸಮಾರಂಭವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳ ಲಾಯಿತು.
ಈ ಸಂಧರ್ಭ ದಲ್ಲಿ ಜಯರಾಮ್ ವೈ ದಂಪತಿಯನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ )ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದ ವಹಿದ್ದರು.ಈ ವೇಳೆ ಉಪನ್ಯಾಸಕರ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ ) ಇದರ ಕಾರ್ಯದರ್ಶಿ, ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಕೆವಿಜಿ ಕಾನೂನು ಕಾಲೇಜಿನ ಶೈಕ್ಷಣಿಕ ಸಲಹೆಗಾರ ಹೇಮಾನಾಥ್. ಕೆ. ವಿ, ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ, ಕಾಲೇಜಿನ ಪ್ರಾoಶುಪಾಲೆ ಪ್ರೊ.ಟೀನಾ.ಎಚ್.ಎಸ್, ಕಾಲೇಜಿನ ಹಿರಿಯ ಗ್ರಂಥಪಾಲಕ ವಸಂತ ಕುಮಾರ್ ಕೆ ಶುಭಹಾರೈಸಿದರು. ಸಹಸಂಸ್ಥೆಗಳ ಅಧಿಕಾರಿ ವರ್ಗದವರು, ಕಾಲೇಜಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.