ಕರಾವಳಿಸುಳ್ಯ

ಸುಳ್ಯ:’ಮೇರಾ ಪೆಹೆಲಾ ವೋಟ್ ದೇಶ್ ಕೇ ಲಿಯೇ’ ಕುರಿತು ಉಪನ್ಯಾಸ ಕಾರ್ಯಕ್ರಮ; ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದ ಡಿಟೇಲ್ಸ್‌ ಇಲ್ಲಿದೆ ನೋಡಿ

189

ನ್ಯೂಸ್‌ ನಾಟೌಟ್‌: ಮತದಾನವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು ಜನರು ಧ್ವನಿ ಎತ್ತುವುದು ಅವಶ್ಯಕ. ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದೆ. ಅನೇಕರಿಗೆ ಮತದಾದ ಅಗತ್ಯತೆ ಬಗ್ಗೆ ತಿಳಿದಿರುವುದಿಲ್ಲ ಹಾಗಾಗಿ ಮತದಾನ ಜಾಗೃತಿಯಂತಹ ಕಾರ್ಯಕ್ರಮಗಳು ಬಹಳ ಅವಶ್ಯಕ. ಈ ನಿಟ್ಟಿನಲ್ಲಿ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವು ಫೆ.6ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ನೆಹರೂ ಮೆಮೋರಿಯಲ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಮತದಾನ ಜಾಗೃತಿ ಸಂಘದ ಸಂಚಾಲಕಿ ಡಾ. ಮಮತ ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ‘ಮೇರಾ ಪೆಹೆಲಾ ವೋಟ್ ದೇಶ್ ಕೇ ಲಿಯೇ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ.ನೀಲಾಂಬಿಕೆ ನಟರಾಜನ್ ವಹಿಸಿದ್ದರು.ಫಾರ್ಮಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸವಿನ್ ಸಿ.ಜಿ ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಿದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕ ವೃಂದದವರು ಹಾಗೂ ಆಸ್ಪತ್ರೆಯ ಇತರ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು . ಕಾರ್ಯಕ್ರಮದ ಅಂಗವಾಗಿ ಚರ್ಚಾ ಸ್ಪರ್ಧೆ ಮತ್ತು ಭಿತ್ತಿಚಿತ್ರ ತಯಾರಿ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮೂಡಿಬಂತು.

See also  ಬೆಳ್ಳಂ ಬೆಳಗ್ಗೆ ಭರ್ಜರಿ ಭೇಟೆಯಾಡಿದ ಕುಡ್ಲದ ಪೊಲೀಸರು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget