ಕರಾವಳಿಸುಳ್ಯ

ಸುಳ್ಯ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರದಿಂದ ಹಿಂದೆ ಸರಿದ ನಂದಕುಮಾರ್,ಮುಂದಿನ ನಡೆ ಏನು?

226

ನ್ಯೂಸ್ ನಾಟೌಟ್ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ.ಇದೀಗ ಕಾಂಗ್ರಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರಿಗೆ ಟಿಕೇಟ್ ಕೈ ತಪ್ಪಿದ ಹಿನ್ನಲೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ತೀರ್ಮಾನ ತೆಗೆದು ಕೊಂಡಿದ್ದ ಕೆಪಿಸಿಸಿ ಸದಸ್ಯ ಹಾಗೂ  ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಹೆಚ್.ಎಂ.ನಂದಕುಮಾರ್ ಅವರು ಚುನಾವಣಾ ಸ್ಪರ್ಧೆಯಿಂದ  ಹಿಂದೆ ಸರಿದಿದ್ದಾರೆ.

ಹೌದು, ನಂದಕುಮಾರ್ ಅಭಿಮಾನಿ ಬಳಗದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಮತ್ತು ನಂದಕುಮಾರ್ ಬಣ  ಚುನಾವಣಾ ಕಣದಲ್ಲಿ‌ ತಟಸ್ಥರಾಗಿ ಇರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಪಕ್ಷೇತರರಾಗಿ ಸ್ಪರ್ಧೆ ಮಾಡದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಮಾತಿಗೆ ಬೆಲೆ ಕೊಟ್ಟು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ನಂದಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಪ್ಪಿತ್ತು. ಈ ಹಿನ್ನಲೆ ಹೆಚ್.ಎಂ. ನಂದಕುಮಾರ್ ಅವರಿಗೆ ಬಿ ಫಾರಂ ಸಿಗಬೇಕು ಎಂದು ಹೈಕಮಾಂಡ್ ಬಳಿ ಬೇಡಿಕೆ ಇಟ್ಟು ಹೋರಾಟ ನಂದಕುಮಾರ್ ಅಭಿಮಾನಿ ಬಳಗ ಮಾಡಿದ್ದರು. ಆದರೆ ಬಿ ಫಾರಂ ಕೈ ತಪ್ಪಿತ್ತು. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಲ್ಲದೆ ತಟಸ್ಥರಾಗಿ ಉಳಿಯುವ ನಿರ್ಣಯಕ್ಕೆ ಬರಲಾಗಿದೆ ಎಂದು ನಂದಕುಮಾರ್ ಅಭಿಮಾನಿ ಬಳಗದ ಪ್ರಕಟಣೆ ತಿಳಿಸಿದೆ.

See also  ಪುತ್ತೂರು: ರಿಕ್ಷಾ ಅಪಘಾತ, ಚಾಲಕ ಗಂಭೀರ
  Ad Widget   Ad Widget   Ad Widget   Ad Widget   Ad Widget   Ad Widget   Ad Widget