ಕರಾವಳಿಸುಳ್ಯ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’,ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನೀಲಾಂಬಿಕೈ ನಟರಾಜನ್

ನ್ಯೂಸ್‌ ನಾಟೌಟ್‌: ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ಶಾಸ್ತ್ರ ವಿಭಾಗದಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾರ್ಯಕ್ರಮವನ್ನು ಕೆವಿಜಿ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಡೀನ್ ನೀಲಾಂಬಿಕೈ ನಟರಾಜನ್ ದೀಪ ಬೆಳಗಿಸಿ ಉದ್ಘಾಟಿಸಿ ಈ ದಿನದ ವಿಶೇಷತೆಗಳ ಬಗ್ಗೆ ಮಾತನಾಡಿದರು. ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆಯರಾದ ಡಾ.ದಿವ್ಯ,ಡಾ.ಮೌಲ್ವಿಕ ಉಪಸ್ಥಿತರಿದ್ದರು.ಈ ವೇಳೆ ಪ್ರಸೂತಿ ಮತ್ತು ಸ್ತ್ರೀ ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಗೀತಾ ದೊಪ್ಪ ಸ್ವಾಗತಿಸಿದರು.ಪ್ರಸೂತಿ ಮತ್ತು ಸ್ತ್ರೀ ರೋಗ ಶಾಸ್ತ್ರ ವಿಭಾಗದ ಪ್ರೋಫೆಸರ್ ಡಾ.ಭವ್ಯ ಹೆಚ್.ಯು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಸಿಬ್ಬಂದಿ ವರ್ಗ ಹಾಗೂ ನೂರಾರು ವಿದ್ಯಾರ್ಥಿಗಳು ಹಾಜರಿದ್ದು ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಮಹತ್ವವನ್ನು ಅರಿತುಕೊಂಡರು.

Related posts

ಕೆ. ವಿ. ಜಿ. ಅಮರಜ್ಯೋತಿ ಪಿಯು ಕಾಲೇಜಿನ ಆನ್‌ಲೈನ್ ಸ್ಕಾಲರ್‌ಶಿಪ್ ಪರೀಕ್ಷೆ ಫಲಿತಾಂಶ ಪ್ರಕಟ

ಮುದ್ದಿನ ಶ್ವಾನ ಚಾಂಪ್ ನನ್ನು ಕಳೆದು ಕೊಂಡ ನೋವಲ್ಲಿ ರಮ್ಯಾ ,ಪುತ್ತೂರು ಕಾಂಗ್ರೆಸ್ ರೋಡ್ ಶೋಗೆ ಗೈರು

ಕರಿಕೆ : 548ನೇ ಕರಿಕೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಗ್ರಾಮೀಣ 58ನೇ ವಾರ್ಷಿಕ ಮಹಾಸಭೆ