ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಘಟಕ ಪ್ರಶಸ್ತಿ ಹಾಗೂ ಯೂನಿಟ್ ಫಸ್ಟ್ ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್. ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಯೋಜನಾಧಿಕಾರಿ ಪುರಸ್ಕಾರ ಲಭಿಸಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ಗಾಜಿನ ಮನೆ ರಾಜಭವನ ದಲ್ಲಿ ಮಾ. 17 ರಂದು ನಡೆಯಲಿದ್ದು, ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.