ಸುಳ್ಯ

ಸುಳ್ಯ:ಎಸ್.ಪಿ.ಮಹಾದೇವ ವರ್ಗಾವಣೆಗೊಂಡ ಹಿನ್ನಲೆ,ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ

ನ್ಯೂಸ್ ನಾಟೌಟ್:ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ.ಮಹಾದೇವ ಅವರು ವರ್ಗಾವಣೆಗೊಂಡ ಹಿನ್ನಲೆ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ
ಮಾಡಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ಕೂಡಿಗೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿತ್ತು.

ವೀಣಾ ಎಂ.ಟಿ. ಯಾರು?

ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ,ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ ವೀಣಾ ಎಂ.ಟಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಸದ್ಯ ಅವರು ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹೆಚ್ಚುವರಿಯಾಗಿ ನಿರ್ವಹಿಸಿದ್ದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರ ಜವಬ್ದಾರಿಯನ್ನು ದುಗ್ಗಲಡ್ಕ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Related posts

ರಾಜ್ಯದಲ್ಲಿಯೇ ನಂ.1 ಶ್ರೀಮಂತ ದೇಗುಲವಿದು, ಈ ಬಾರಿಯ ಆದಾಯ 123 ಕೋಟಿ ರೂ.

ಪಂಜ:ಹೃದಯಾಘಾತಕ್ಕೆ ಯುವಕ ಬಲಿ

ಗ್ರಾಮ ಪಂಚಾಯತ್ ಗ್ರಂಥಾಲಯ ಉನ್ನತೀಕರಿಸಿ ಡಿಜಿಟಲ್ ಗ್ರಂಥಾಲಯವಾಗಿಸಲು ನಿರ್ಧಾರ, ಭವಾನಿಶಂಕರ್ ಅಧ್ಯಕ್ಷತೆಯಲ್ಲಿ ಸಭೆ