ನ್ಯೂಸ್ ನಾಟೌಟ್ :ಸುಳ್ಯ ಸೈಂಟ್ ಜೋಸೆಫ್ ಪ್ರೌಢಶಾಲಾ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ದ.ಕ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಡಿ.1 ರಂದು ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಬಂಟ್ಸ್ ಹಾಸ್ಟೆಲ್ ಮಂಗಳೂರಿನಲ್ಲಿ ನಡೆದಿದ್ದು,ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಇದರಲ್ಲಿ ಸುಳ್ಯ ಸೈಂಟ್ ಜೋಸೆಫ್ ಪ್ರೌಢಶಾಲಾ ವಿದ್ಯಾರ್ಥಿಗಳಾದ ಸಮನ್ಯು ಎಸ್ ಶೆಟ್ಟಿ (10ನೇ ತರಗತಿ ),ಅಭಿರಾಮ್ ಭಟ್ (9ನೇ ತರಗತಿ )ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪಲ್ಲವಿ ಜೆ.ಎಚ್.( 5ನೇ ತರಗತಿ) ಕನ್ನಡ ಕವನ ವಾಚನದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರಿಗೆ ಶಾಲಾ ಸಂಚಾಲಕರಾದ ಫಾದರ್ ವಿಕ್ಟರ್ ಡಿಸೋಜ ಹಾಗೂ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮರವರು ಶುಭಹಾರೈಸಿ ಪ್ರೋತ್ಸಾಹಿಸಿದ್ದಾರೆ.