ಕರಾವಳಿಸುಳ್ಯ

ಸುಳ್ಯ:NMPUCನಲ್ಲಿ ಟ್ಯಾಲೆಂಟ್ಸ್ ಡೇ ಸಂಭ್ರಮ,ಹಾಡು,ನೃತ್ಯ,ಪ್ರಹಸನದ ಮೂಲಕ ಗಮನ ಸೆಳೆದ ವಿದ್ಯಾರ್ಥಿಗಳು

ನ್ಯೂಸ್ ನಾಟೌಟ್ : ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡಬೇಕು ಎಂಬ ಸದುದ್ದೇಶದಿಂದ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ನಡೆಯಿತು.ಕೆವಿಜಿ ಆಡಿಟೋರಿಯಂ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಈ ವೇಳೆ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ” ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ ಹೊರ ತರಲು ಇದೊಂದು ಉತ್ತಮ ವೇದಿಕೆ. ಹೀಗಾಗಿ ಸಿಕ್ಕ ಅವಕಾಶವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡು ಪ್ರತಿಭಾ ಪ್ರದರ್ಶನವನ್ನು ನೀಡಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭ ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ರೇಷ್ಮಾ ಎಂ.ಎಂ,ಹರೀಶ ಸಿ,ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಡು,ನೃತ್ಯ,ಪ್ರಹಸನದ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

Related posts

ಬೆಳ್ತಂಗಡಿ: ಮಕ್ಕಳನ್ನು ಬೈಕ್ ನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ..! ಹೆದರಿ ಬೈಕ್ ಬಿಟ್ಟು ಓಡಿದ ತಂದೆ-ಮಕ್ಕಳು..!

ಒಂದೇ ಕುಟುಂಬದ ತಾಯಿ ಮಕ್ಕಳ ಭೀಕರ ಹತ್ಯೆ, ಚೂರಿಯಿಂದ ಚುಚ್ಚಿ ಅಪರಿಚಿತ ಪರಾರಿ

ಕಲ್ಲುಗುಂಡಿಯ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ವಿದ್ಯಾರ್ಥಿಗಳು ಮೆಚ್ಚಿದ ಶಿಕ್ಷಕಿ ಇನ್ನಿಲ್ಲ, ನೂರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದ ಯಶೋಧ ಟೀಚರ್ ನಿಧನ