Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಸಿಂಧೂ ಜಲ ಒಪ್ಪಂದದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕ್ ನಿಂದ ಭಾರತಕ್ಕೆ ಪತ್ರ..! ಭಾರತದ ಜಲಶಕ್ತಿ ಸಚಿವಾಲಯಕ್ಕೆ ಮನವಿ..!

550

ನ್ಯೂಸ್‌ ನಾಟೌಟ್‌: ಅಮಾನತ್ತಿನಲ್ಲಿಟ್ಟ ಸಿಂಧೂ ನದಿ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ. ಭಾರತ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯವು ಭಾರತದ ಜಲಶಕ್ತಿ ಸಚಿವಾಲಯಕ್ಕೆ ಮನವಿ ಮಾಡಿದೆ ಎಂದು ವರದಿ ತಿಳಿಸಿದೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ಪಾಕ್‌ ಪ್ರಾಯೋಜಿತ ಉಗ್ರರು ದಾಳಿ ನಡೆಸಿದ ಬಳಿಕ ವಿಶ್ವ ಬ್ಯಾಂಕ್‌ ಮಧ್ಯಸ್ಥಿಕೆಯಲ್ಲಿ 1960 ರಲ್ಲಿ ನಡೆದಿದ್ದ ಸಿಂಧೂ ನದಿ ಒಪ್ಪಂದವನ್ನು ಭಾರತ ಅಮಾನತ್ತಿನಲ್ಲಿಟ್ಟಿದೆ.

ಒಪ್ಪಂದವನ್ನು ರದ್ದುಗೊಳಿಸಿದ ಕಾರಣ ಭಾರತ ಸಿಂಧೂ ನದಿಯ ಉಪನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಜಲಾಶಯದಿಂದ ಯಾವಾಗ ಬೇಕಾದರೂ ನೀರು ಬಿಡಬಹುದು ಮತ್ತು ಯಾವಾಗ ಬೇಕಾದರೂ ನೀರನ್ನು ತಡೆದು ಹಿಡಿಯಬಹುದು. ಒಪ್ಪಂದ ಜಾರಿಯಲ್ಲಿದ್ದಾಗ ಜಲಾಶಯದಿಂದ ನೀರನ್ನು ಹೊರಗೆ ಹರಿಸುವಾಗ ಭಾರತ ಪಾಕಿಸ್ತಾನಕ್ಕೆ ತಿಳಿಸಬೇಕಿತ್ತು. ಆದರೆ ಈಗ ಭಾರತ ತನಗೆ ಇಷ್ಟ ಬಂದ ಸಮಯದಲ್ಲಿ ನೀರನ್ನು ಜಲಾಶಯದಿಂದ ಹರಿಸುತ್ತಿದೆ.

ರಕ್ತ ಮತ್ತು ನೀರು ಜೊತೆಯಾಗಿ ಹರಿಯಲು ಸಾಧ್ಯವಿಲ್ಲ. ಭಯೋತ್ಪಾದಕತೆ ಮತ್ತು ಮಾತುಕತೆ ಎರಡು ಜೊತೆಯಾಗಿ ಸಾಗುವುದಿಲ್ಲ. ಉಗ್ರರ ವಿರುದ್ಧ ಪಾಕ್‌ ಕಠಿಣ ಕ್ರಮ ಕೈಗೊಳ್ಳುವವರೆಗೂ ಈ ಒಪ್ಪಂದ ಅಮಾನತ್ತಿನಲ್ಲಿ ಇರಲಿದೆ ಎಂದು ಭಾರತ ಹೇಳಿತ್ತು.

ಬೇಸಿಗೆಯಲ್ಲಿ ಭಾರತ ಕೆಲ ದಿನಗಳ ಕಾಲ ನೀರನ್ನು ಹಿಡಿದಿಟ್ಟುಕೊಳ್ಳಬಹುದು. ಆದರೆ ದೀರ್ಘ ಸಮಯದವರೆಗೆ ನೀರನ್ನು ಸಂಗ್ರಹಿಸಲು ಸಾಧ್ಯವಿಲ್ಲ. ಹೀಗಾಗಿ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲು ಭಾರತ ಈಗ ಮತ್ತೆ ಎರಡು ಜಲಾಶಯ ನಿರ್ಮಾಣಕ್ಕೆ ಮುಂದಾಗಿದೆ ಮತ್ತು ಆ ನೀರನ್ನು ಊರು ರಾಜ್ಯಗಳಿಗೆ ಪಥ ಬದಲಿಸಲು ನಿರ್ಧರಿಸಲಾಗಿದೆ. ಆದರೆ ಈ ನಿರ್ಧಾರವನ್ನು ಮರುಪರಿಶೀಲಿಸಿ ನೀರು ಹರಿಸುವಂತೆ ಪಾಕ್ ಜಲಸಂಪನ್ಮೂಲ ಸಚಿವಾಲಯ ಭಾರತಕ್ಕೆ ಪತ್ರ ಬರೆದಿದೆ.

ರಾಜಕಾರಣಿಗಳ ಜತೆ ‘ಡೇಟಿಂಗ್ʼಗೆ ಬನ್ನಿ ಎಂದು ನಟಿ ನಮ್ರತಾಗೆ ಕಿರುಕುಳ..! ಸ್ಕ್ರೀನ್‌ ಶಾಟ್‌ ಹಂಚಿಕೊಂಡ ಮಾಜಿ ʼಬಿಗ್‌ ಬಾಸ್‌ʼ ಸ್ಪರ್ಧಿ

See also  ವಿಪಕ್ಷಗಳ ವಿರೋಧದ ನಡುವೆ ವಕ್ಫ್‌ ತಿದ್ದುಪಡಿ ಮಸೂದೆಗೆ ಮುಸ್ಲಿಂ ಮಹಿಳೆಯರ ಬೆಂಬಲ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget