ಕರಾವಳಿ

ಕಂಬಳ ಮತ್ತು ಜಲ್ಲಿಕಟ್ಟುಗೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ

ನ್ಯೂಸ್ ನಾಟೌಟ್ :ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ.ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರ ಸಂವಿಧಾನ ಪೀಠವು, ಜಾನುವಾರಗಳ ಮೇಲಿನ ದೌರ್ಜನ್ಯ ತಡೆಗೆ ಮತ್ತು ಕ್ರೀಡೆಯನ್ನು ಮುಂದುವರಿಸಲು ಅನುವು ಮಾಡಿಕೊಡಲು ತಿದ್ದುಪಡಿಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದೆ.

Related posts

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರೋರಾತ್ರಿ ಭೀಕರ ಅಪಘಾತ! ಕೊನೆಯುಸಿರೆಳೆದ ಆ ವ್ಯಕ್ತಿ ಯಾರು?

ಸ್ವಾತಂತ್ರ್ಯೋತ್ಸವ ಸಂಭ್ರಮ

ಸೈಲೆಂಟಾಗಿದ್ದ ಹೆಣ್ಣು ಮಗುವಿನ ಮೇಲೆ ದಾಳಿ ಮಾಡಿದ ಕೋತಿ,ಓಡಿ ತಪ್ಪಿಸಿಕೊಳ್ಳಲೆತ್ನಿಸಿದರೂ ಬಿಡದ ಕಪಿರಾಯ,ಬಾಲಕಿ ಗಂಭೀರ