ಕ್ರೈಂವೈರಲ್ ನ್ಯೂಸ್

ಸುಪ್ರೀಂಕೋರ್ಟ್​ನ ಹಿರಿಯ ಮಾಜಿ ವಕೀಲ ನಿಧನ, ಪದ್ಮಭೂಷಣ ಪುರಸ್ಕೃತ ಈ ಸಂವಿಧಾನ ತಜ್ಞನ ಬಗ್ಗೆ ಇಲ್ಲಿದೆ ಮಾಹಿತಿ

200

ನ್ಯೂಸ್‌ ನಾಟೌಟ್‌ : ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ಮಂಗಳವಾರ ರಾತ್ರಿ(ಫೆ.20) ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾರಿಮನ್ ಜನವರಿ 10, 1929 ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದರು . ಅವರು ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದರು.

ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯಾಗಿದ್ದಾರೆ. ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಎಎಎಸ್​ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

95 ವರ್ಷ ವಯಸ್ಸಾಗಿದ್ದು, 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತ್ತು.

See also  ಪಕ್ಷದ ಕಚೇರಿಯಲ್ಲಿ ಮುಖಂಡನಿಂದ ಮಹಿಳೆ ಜೊತೆ ಅಸಭ್ಯ ವರ್ತನೆ..! ವಿಡಿಯೋ ವೈರಲ್ ಆದ ಬೆನ್ನಲ್ಲೇ ಮುಖಂಡನಿಗೆ ನೋಟಿಸ್..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget