ಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರುರಾಜ್ಯ

ಸುರತ್ಕಲ್‌: ಸಮುದ್ರದಲ್ಲಿ ಈಜಲು ಹೋದ 3 ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಸಾವು..! ಓರ್ವನನ್ನು ರಕ್ಷಿಸಿದ ಮೀನುಗಾರರು

115
Pc Cr: Vartha bharati

ನ್ಯೂಸ್ ನಾಟೌಟ್ :ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ಕು ಮಂದಿ ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಸುರತ್ಕಲ್ ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಬುಧವಾರ(ಜ.8) ನಡೆದಿದೆ.

ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30), ಬೆಂಗಳೂರು ಜೆ.ಪಿ. ನಗರ ನಿವಾಸಿ ಸತ್ಯವೇಲು (30) ಎಂದು ತಿಳಿದು ಬಂದಿದ್ದು, ಬೀದರ್ ಜಿಲ್ಲೆಯ ಹಂಗಾರಗಾ ನಿವಾಸಿ ವಿಶ್ವಂಬರ್ ಎಂಬವರ ಪುತ್ರ ಪರಮೇಶ್ವರ್‌ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿದ್ದರು. ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಂಗಳೂರಿನ ಹೊಟೇಲ್‌ ವೊಂದರಲ್ಲಿ ಬೆಳಗ್ಗಿನ ಉಪಹಾರ ಸೇವಿಸಿ ಬಳಿಕ ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದಿದ್ದಾರೆ. ಅಲ್ಲಿ ಎಲ್ಲರೂ ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭ ನಾಲ್ವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಮನಿಸುತ್ತಿದ್ದ ಸ್ಥಳೀಯ ಮೀನುಗಾರರು ನಾಲ್ವರ ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲೇ ಮೂವರು ನೀರು ಪಾಲಾಗಿದ್ದರು. ಓರ್ವನನ್ನು ರಕ್ಷಿಸಿ ತಕ್ಷಣ ಆತನನ್ನು ನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸುರತ್ಕಲ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click

https://newsnotout.com/2025/01/kerala-kodamanittaya-kannada-news-elephant-in-temple-festival/
https://newsnotout.com/2025/01/isro-narayanan-appointeed-as-space-secretory-as-well-as-chief/
https://newsnotout.com/2025/01/hmpv-viras-issue-health-department-kannada-news-d/
https://newsnotout.com/2025/01/udupi-fish-theft-kannada-news-at-night-viral-news/
https://newsnotout.com/2025/01/kannada-news-actress-honey-rose-viral-post-business-man-arrested/
See also  ಪ್ರವೀಣ್ ನೆಟ್ಟಾರ್ ಗೆ ತಲ್ವಾರ್ ನಿಂದ ಕಡಿದು ಪರಾರಿಯಾದವರ ಗುರುತು ಪತ್ತೆ
  Ad Widget   Ad Widget   Ad Widget   Ad Widget   Ad Widget   Ad Widget