ಕರಾವಳಿಸುಳ್ಯ

ಸಮೀಕ್ಷೆಗಳು ಕಾಂಗ್ರೆಸ್ ಪರ ಇದ್ದರೂ ಉಲ್ಟಾ ಆಗಲಿವೆ,ಸುಬ್ರಹ್ಮಣ್ಯದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆತ್ಮವಿಶ್ವಾಸದ ಮಾತು

ನ್ಯೂಸ್ ನಾಟೌಟ್ : ಮತದಾನ ಬಳಿಕ ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಲೆಕ್ಕಾಚಾರದಲ್ಲಿ ಜನ ಬ್ಯುಸಿಯಾಗಿದ್ದಾರೆ.ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ.ಯಾರು ಬಹುಮತಗಳ ಅಂತರದಲ್ಲಿ ವಿನ್ ಆಗಬಹುದು?ಹೀಗೆ ನಾನಾ ರೀತಿಯಲ್ಲಿ ಚರ್ಚೆ ನಡೆಯುತ್ತಿದೆ.

ಆದರೆ ಹಲವು ಸಮೀಕ್ಷೆಗಳು ಕಾಂಗ್ರೆಸ್‌ ಪರವೇ ಇದ್ದು,ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇನ್ನು ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆಯಿಲ್ಲ. ಈ ಬಾರಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂದಿನ ಸಮೀಕ್ಷೆಗಳು ಕಾಂಗ್ರೆಸ್‌ ಪರ ಇದ್ದರೂ ಕೂಡ ಆದ್ರೆ ಫಲಿತಾಂಶ ಬಂದಾಗ ಎಲ್ಲಾ ಉಲ್ಟಾ ಆಯಿತು. ಈ ಬಾರಿ ಸಮೀಕ್ಷೆಗಳೂ ಹಾಗೇ ಆಗಲಿವೆ ಎಂದರು.

Related posts

ಉಡುಪಿಯ ತ್ರಾಸಿ ಬೀಚ್‌ ನಲ್ಲಿ ಟೂರಿಸ್ಟ್ ಬೋಟ್ ಪಲ್ಟಿ ..! ಪ್ರವಾಸಿಗ ಪಾರು, ಬೋಟ್ ರೈಡರ್ ಕಣ್ಮರೆ..!

ತಲ್ವಾರ್ ದಾಳಿ ನಡೆದಿಲ್ಲ: ಸುಳ್ಳು ಸುದ್ದಿ ಹಬ್ಬಿಸಿದ ಯುವಕ

ಮೂರು ಸ್ಕೂಟರ್ ಮಧ್ಯೆ ಅಪಘಾತ ; ಓರ್ವ ಗಂಭೀರ ಗಾಯ,ಮತ್ತಿಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರು