ಕರಾವಳಿಸುಳ್ಯ

ಸುಳ್ಯ:ಡಾ.ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ‌ ಕೋರ್ಟ್‌ನಿಂದ ಜಾಮೀನು ಮಂಜೂರು

216

ನ್ಯೂಸ್ ನಾಟೌಟ್ :ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊ*ಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿದ್ದ ಡಾ.ಕೆ.ವಿ.ರೇಣುಕಾ ಪ್ರಸಾದ್ ಕೆ.ವಿ.ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.‌ಡಾ.ರೇಣುಕಾ ಪ್ರಸಾದ್‌ ಸೇರಿದಂತೆ ಉಳಿದ ಮಂದಿಗೆ ಕರ್ನಾಟಕ ಹೈಕೋರ್ಟ್ ಕಳೆದ.ಅ.5ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಕಳೆದ ಅಕ್ಟೋಬರ್ 5ರಂದು ಆಕಾಶಭವನ ಶರಣ್ ಹೊರತುಪಡಿಸಿ ಡಾ. ರೇಣುಕಾಪ್ರಸಾದ್ ಮತ್ತು ಇತರರ ಬಂಧನವಾಗಿತ್ತು.ಈ ಹಿನ್ನಲೆಯಲ್ಲಿ ಡಾ.ರೇಣುಕಾ ಪ್ರಸಾದ್ ಹಾಗೂ ಇತರರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಅರ್ಜಿ ಸಲ್ಲಿಸಿದ್ದರು.ಇದರ ಮೇಲೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಪ್ರತಿವಾದ ನಡೆದಿದ್ದು,ಸುಪ್ರೀಂ ಕೋರ್ಟ್ ಡಾ.ರೇಣುಕಾಪ್ರಸಾದ್ ಹಾಗೂ ಇತರರಿಗೆ ಜ.8 ರಂದು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

See also  ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ ಬೆಂಗಳೂರಿನ ಮನೆಯಲ್ಲಿ ಅಡಗಿದ್ದ ಭೂಪ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget