ಕರಾವಳಿಕೊಡಗುಸುಳ್ಯ

ಸುಳ್ಯ : ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಎತ್ನಿಕ್ ಡೇ’ ಸಂಭ್ರಮ,ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ಸುಳ್ಯ:ಸದಾ ಪಠ್ಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು “ಎತ್ನಿಕ್ ಡೇ ” ಸಂಭ್ರಮ.ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಕ್ಯಾಂಪಸ್‌ನಲ್ಲಿ ಕಂಗೊಳಿಸಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೇರಳ ಶೈಲಿಯ ಚೆಂಡೆ ವಾದ್ಯಗಳು, ದೇಶದ ವಿಭಿನ್ನ ಸಂಸ್ಕೃತಿಗಳನ್ನು ಬಿಂಬಿಸುವ ಹಲವು ಉಡುಗೆ ತೊಡುಗೆಗಳು ಎತ್ನಿಕ್‌ಡೇಯ ಮೆರುಗನ್ನು ಹೆಚ್ಚಿಸಿತ್ತು.

ಕಾರ್ಯಕ್ರಮದಲ್ಲಿ ವಿವಿಧ ರೀತಿಯ ನೃತ್ಯ ಪ್ರದರ್ಶನಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮವನ್ನು ವೀಕ್ಷಿಸಿ ಸಂಭ್ರಮಿಸಿದರು. ವಿದ್ಯಾರ್ಥಿಗಳಾದ ಖುಷಿ ಮತ್ತು ಕಿರಣ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಸಂಯೋಜಕರಾದ ಸಿವಿಲ್ ವಿಭಾಗದ ಪ್ರೊ. ಕೃಷ್ಣರಾಜ್ ಎಂ.ವಿ. ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಮಡಿಕೇರಿ: 549 ಕೆ.ಜಿ ತೂಕದ ಬೃಹತ್ ಕಾಡುಕೋಣವನ್ನು ಮಾಂಸ ಮಾಡಿದ ಕಿರಾತಕರು, ಅರಣ್ಯಧಿಕಾರಿಗಳ ದಾಳಿ ವೇಳೆ ಓರ್ವ ಪರಾರಿ, ಮತ್ತೋರ್ವ ಅರೆಸ್ಟ್

ರಶ್ಮಿಕಾ ಮಂದಣ್ಣಗೆ 80 ಲಕ್ಷ ರೂ. ವಂಚನೆಯಾಗಿಲ್ಲ;ನಟಿ , ಮ್ಯಾನೇಜರನ್ನು ವಜಾಗೊಳಿಸಿದ್ದು ನಿಜನಾ?

ಕೊಡಗಿನಲ್ಲಿ ಮುಂದುವರಿದ ನಿಷೇಧಾಜ್ಞೆ: ಪೊಲೀಸರಿಂದ ಪಥಸಂಚಲನ