ಕ್ರೀಡೆದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ಟಿ-20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಶುಭ ಕೋರಿದ ಸಿಎಂ, ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ ಎಂದ ಸಿದ್ದರಾಮಯ್ಯ

ನ್ಯೂಸ್ ನಾಟೌಟ್ : ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದಾರೆ.

ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ತಿಳಿಸಿದ್ದಾರೆ.

Click 👇

https://newsnotout.com/2024/06/dengue-6-year-old-baby-nomre-health-care-kannada-news-chikkamagaluru
https://newsnotout.com/2024/06/school-sindhi-tamanna-bhatia-text-in-school-text-book-perents-opp
https://newsnotout.com/2024/06/actress-rakshita-met-darshan-in-jail-and-reaction-with-prem-kannada-news

Related posts

‘ಅಧಿಕಾರಕ್ಕೆ ಬಂದು ಕೆಲವೇ ದಿನವಷ್ಟೇ ಆಗಿದೆ, ಆಕ್ರಮಣಕಾರಿಯಾಗಿ ವರ್ತಿಸಬೇಡಿ’, DCM ಡಿ.ಕೆ. ಶಿವ ಕುಮಾರ್‌ಗೆ ತಮಿಳುನಾಡು ಸಚಿವ ಹೇಳಿದ್ದೇನು?

ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಹೆಚ್ಚಾಗುತ್ತಿದೆ ಆತಂಕ..! ಕೋರ್ಟ್ ಮುಂದೆ ಸತ್ಯ ಒಪ್ಪಿಕೊಂಡ ಸಂಸ್ಥೆ..!ವೈದ್ಯರು ಈ ಬಗ್ಗೆ ಹೇಳಿದ್ದೇನು..?

6 ಕೋಟಿ ರೂಪಾಯಿ ಕೊಟ್ಟು 300 ರೂಪಾಯಿಯ ನಕಲಿ ಆಭರಣ ಖರೀದಿಸಿದ ವಿದೇಶಿ ಮಹಿಳೆ..! ಯು.ಎಸ್ ಗೆ ತೆರಳಿದ ಬಳಿಕ ಬಯಲಾಯ್ತು ಮಹಾ ಮೋಸ..!