ಕೊಡಗುಸುಳ್ಯ

ಶಾಸಕರಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

301

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಾಸಕ ಕೆ.ಜಿ.ಬೋಪಯ್ಯ ಮತ್ತು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಟ್ಯಾಬ್ ವಿತರಿಸಿದರು.

ಶಾಸಕ ಕೆ.ಜಿ.ಬೋಪಯ್ಯ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ಹಾಗೂ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಜಿಲ್ಲಾ ಪಂಚಾಯತ್ ಶಾಸಕರ ಕಚೇರಿ ಆವರಣದಲ್ಲಿ ಟ್ಯಾಬ್ ವಿತರಿಸಿದರು. ಮಡಿಕೇರಿ ತಾಲೂಕಿನ ಒಟ್ಟು 50 ವಿದ್ಯಾರ್ಥಿಗಳಿಗೆ ಟ್ಯಾಬ್‌ಗಳನ್ನು ವಿತರಿಸಿ ವಿದ್ಯಾರ್ಥಿಗಳು ಸೌಲಭ್ಯವನ್ನು ಬಳಸಿ ಉನ್ನತ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಿ ನಾಡಿನ ಕೀರ್ತಿಯನ್ನು ಹೆಚ್ಚಿಸಲಿ ಎಂದು ಹಾರೈಸಿದರು. ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮತ್ತು ಸಂಘಟಕರು ಉಪಸ್ಥಿತರಿದ್ದರು.

See also  ಸುಳ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳಿಲ್ಲ, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget