ನ್ಯೂಸ್ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಮಾತನಾಡಿ, ವಿದ್ಯಾರ್ಥಿಗಳು ಅವಕಾಶವನ್ನು ಉಪಯೋಗಿಸಿಕೊಂಡು ಉತ್ತಮ ಪ್ರತಿಭಾ ಪ್ರದರ್ಶನ ನೀಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ ಬಿ,ಉಪನ್ಯಾಸಕ ವೃಂದದವರು-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಡು, ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು. ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಸುಗುಣ ಸ್ವಾಗತಿಸಿ, ಹೆಡ್ ಬಾಯ್ ಯಶವಂತ್ ಕುಶಾಲಪ್ಪ ವಂದಿಸಿದರು. ಪ್ರಥಮ ವಿಜ್ಞಾನ ವಿಭಾಗದ ಅಭಿಜ್ಞ ಡಿ ಎನ್, ಅರ್ಚನಾ ಪಿ.ಪಿ, ಪ್ರ. ವಾಣಿಜ್ಯ ವಿಭಾಗದ ರೀತಶ್ರೀ ಕಾರ್ಯಕ್ರಮ ನಿರೂಪಿಸಿದರು.