Latestಕ್ರೀಡೆ/ಸಿನಿಮಾಸಿನಿಮಾ

ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ನಟ ಕಮಲ್ ಹಾಸನ್ ವಿರುದ್ಧ ಬುಗಿಲೆದ್ದ ಆಕ್ರೋಶ;ಕ್ಷಮೆ ಯಾಚಿಸುವಂತೆ ಕರವೇ ಮತ್ತು ಕನ್ನಡಪರ ಸಂಘಟನೆ ಆಗ್ರಹ

453

ನ್ಯೂಸ್‌ ನಾಟೌಟ್:ನಟ ಕಮಲ್ ಹಾಸನ್ ಅವರು ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿದೆ. ಇದೀಗ ಇವರ ವಿರುದ್ಧ ಕರವೇ ಮತ್ತು ಕನ್ನಡಪರ ಸಂಘಟನೆ ಆಕ್ರೋಶ ವ್ಯಕ್ತ ಪಡಿಸಿವೆ. ‘ಥಗ್ ಲೈಫ್’ ಚಿತ್ರದ ಪ್ರಚಾರಕ್ಕಾಗಿ (ಮೇ 27) ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ‘ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಕಮಲ್ ಹಾಸನ್ ವಿವಾದದ ಹೇಳಿಕೆ ನೀಡಿದ್ದಾರೆ.

ಇದೀಗ ಈ ಹೇಳಿಕೆಗೆ ಕರವೇ ಮತ್ತು ಕನ್ನಡಪರ ಸಂಘಟನೆ ಕ್ಷಮೆಯಾಚಿಸುವಂತೆ ಪಟ್ಟುಹಿಡಿದಿವೆ.ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಫಿಲ್ಮ್ ಚೇಂಬರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ಧಕ್ಕೆಯಾಗಿದೆ. ಕಮಲ್ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ತಕ್ಷಣ ಅವರು ತಮ್ಮ ತಪ್ಪನ್ನ ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ‘ಥಗ್ ಲೈಫ್’ ಚಿತ್ರದ ರಿಲೀಸ್ ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ. 

ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಕೂಡ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದರು. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆ ತ್ರಿಷಾ ಕೃಷ್ಣನ್, ಅಭಿರಾಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಮಣಿರತ್ನಂ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ.

See also  ಸುಳ್ಯ: ನಾಳೆ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಕೂಟ ಆಯೋಜನೆ, ಬೆಳಗ್ಗೆ 10 ಗಂಟೆಗೆ ಕೂಟಕ್ಕೆ ಚಾಲನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget