ಕ್ರೀಡೆ/ಸಿನಿಮಾವೈರಲ್ ನ್ಯೂಸ್

ತಮಿಳಿನ ಖ್ಯಾತ ನಟ ಅಜಿತ್ ಆಸ್ಪತ್ರೆಗೆ ದಾಖಲು, ಇಲ್ಲಿದೆ ಸಂಪೂರ್ಣ ಮಾಹಿತಿ

155

ನ್ಯೂಸ್ ನಾಟೌಟ್: ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್ ಗುರುವಾರ(ಮಾ.7) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅಜಿತ್ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಕೆಲವು ಅಭಿಮಾನಿ ಪೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯಂತೆ ಅಜಿತ್ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.

ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದು ನಿಜ ಆದರೆ ಈ ಬಗ್ಗೆ ಯಾವುದೇ ಊಹಾಪೋಹಗಳನ್ನು ಹರಿಬಿಡುವುದು ಬೇಡ, ಆಸ್ಪತ್ರೆಯಿಂದಲೇ ಖಚಿತ ಮಾಹಿತಿ ಹೊರಬೀಳಲಿದೆ ಎಂದು ಅಜಿತ್​ರ ಆಪ್ತರು ಮಾಧ್ಯಮಗಳಿಗೆ ತಿಳಿಸಿರುವುದಾಗಿ ತಮಿಳಿನ ಕೆಲ ಮಾಧ್ಯಮಗಳು ವರದಿ ಮಾಡಿವೆ. ಅಜಿತ್​, ಹಠಾತ್ತನೆ ಆಸ್ಪತ್ರೆಗೆ ದಾಖಲಾಗಿರುವುದು ಅವರ ಅಭಿಮಾನಿಗಳಿಗೆ ಆತಂಕ ತಂದಿದೆ.

ಅಜಿತ್ 1990ರಿಂದಲೂ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವಿಜಯ್, ರಜನೀಕಾಂತ್, ಸೂರ್ಯ ರೀತಿಯಲ್ಲಿಯೇ ಭಾರಿ ದೊಡ್ಡ ಅಭಿಮಾನಿ ಬಳಗವನ್ನು ಅಜಿತ್ ಹೊಂದಿದ್ದಾರೆ. ತಮ್ಮ 35 ವರ್ಷಗಳ ವೃತ್ತಿ ಜೀವನದಲ್ಲಿ ಹಲವು ಸೂಪರ್-ಡೂಪರ್ ಹಿಟ್ ಸಿನಿಮಾಗಳನ್ನು ಅಜಿತ್ ಕುಮಾರ್ ನೀಡಿದ್ದಾರೆ.

See also  ಪ್ರವಾಹ ನೀರಿನಿಂದ ಮುಳುಗಿದ್ದ ಸೇತುವೆ ಮೇಲೆ ಜೀಪ್ ಓಡಿಸಿದ ಚಾಲಕ..! ಆತನನ್ನು ಬಂಧಿಸಿದ ಪೊಲೀಸರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget