ನ್ಯೂಸ್ ನಾಟೌಟ್: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕಾರು ಅಪಘಾತಕ್ಕೀಡಾಗಿದೆ. ಭಾನುವಾರ(ಫೆ.16) ಮುಂಜಾನೆ ವಾಲಾಜಪೇಟೆ ಟೋಲ್ ಪ್ಲಾಜಾ ಬಳಿ ನಟ ಯೋಗಿ ಬಾಬು ಕಾರು ಅಪಘಾತಕ್ಕೀಡಾಗಿದ್ದು, ವಾಹನವು ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ನಟ ಯೋಗಿ ಬಾಬು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಯೋಗಿ ಬಾಬು ಅವರ ವಾಹನ ಕಂಟ್ರೋಲ್ ತಪ್ಪಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ. ಆದರೆ ಯೋಗಿ ಬಾಬುಗೆ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಲಾಗುತ್ತಿದೆ.
#WATCH | வாலாஜாபேட்டை அருகே நடிகர் யோகிபாபு சென்ற கார் விபத்து
ஓட்டுநரின் கட்டுப்பாட்டை இழந்த கார் சாலையில் தடுப்பில் மோதியதால் விபத்து ஏற்பட்டுள்ளது. #SunNews | #YogiBabu | #RoadAccident pic.twitter.com/VVUpOVETt4
— Sun News (@sunnewstamil) February 16, 2025
ಈ ಬಗ್ಗೆ ನಟ ಸೋಶಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ವಂದಂತಿಗಳನ್ನು ನಂಬಬೇಡಿ. ನಾನು ಕ್ಷೇಮವಾಗಿದ್ದೇನೆ ಎಂದು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
“ಅದು ಯಾವುದೋ ಕಂಪನಿ ಕಾರು. ಬ್ಯಾರಿಕೇಡ್ ಗೆ ಚೂರು ತಾಗಿ ಘಟನೆ ನಡೆದಿದೆ ಅಷ್ಟೇ. ಎಲ್ಲರೂ ಕ್ಷೇಮವಾಗಿದ್ದೇವೆ, ಯಾರಿಗೂ ಯಾವುದೇ ಅನಾಹುತ ನಡೆದಿಲ್ಲ. ನಾನು ಅಲ್ಲಿ ಏನಾಗಿದೆ ಎಂಬುದನ್ನು ನೋಡಿ ಕೊನೆಗೆ ಎಲ್ಲರನ್ನೂ ಅಲ್ಲಿಂದ ಕಳಿಸಿಕೊಟ್ಟೆವು” ಎಂದು ಯೋಗಿ ಬಾಬು ಅವರು ಸ್ಪಷ್ಟನೆ ನೀಡಿದ್ದಾರೆ.
Click 👇🏻
ಸಿಎಂ ಕಚೇರಿಯ ‘ಕಚೇರಿ ಟಿಪ್ಪಣಿ’ ನಕಲು ಪ್ರಕರಣ..! ಹಲವಾರು ಎಂ.ಎಲ್.ಎಗಳ ಬಳಿ ಪಿಎ ಆಗಿದ್ದವ ಅರೆಸ್ಟ್..!
ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು..! ಮೋದಿ ಸಂತಾಪ
ಅಮೆರಿಕದಿಂದ ಭಾರತೀಯರ 2 ಹಂತದ ಗಡಿಪಾರು..! ಅಮೃತಸರದಲ್ಲಿ ಬಂದಿಳಿದ 119 ಮಂದಿ..!
ನಾಣ್ಯಗಳಿಂದ ಕಾರನ್ನು ಅಲಂಕರಿಸಿದ ರಾಜಸ್ತಾನಿ ವ್ಯಕ್ತಿ..! ವಿಡಿಯೋ ವೈರಲ್