Latestದೇಶ-ವಿದೇಶರಾಜಕೀಯ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಡ್ತಾರಾ..? ತಮಿಳುನಾಡು ವಿಧಾನಸಭಾ ಚುನಾವಣೆಗೆ ಹೊಸ ಕಸರತ್ತು..!

666

ನ್ಯೂಸ್‌ ನಾಟೌಟ್: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ವರದಿ ತಿಳಿಸಿದೆ.

2023 ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. ಈಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ವೇಗಗೊಂಡಿದ್ದು, ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬಹುದು ಎನ್ನಲಾಗಿದೆ.

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ, ಕೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಬಿಜೆಪಿಗೆ ಒಂದೇ ಗೌಡರ್ ಸಮುದಾಯದ ಎರಡೂ ಮಿತ್ರ ಪಾಲುದಾರರ (ಬಿಜೆಪಿ-ಎಐಎಡಿಎಂಕೆ) ಮುಖಗಳು ಬೇಕಾಗಿಲ್ಲ. ಅಣ್ಣಾಮಲೈ ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಇಬ್ಬರೂ ಪ್ರಬಲ ಹಿಂದುಳಿದ ಸಮುದಾಯಕ್ಕೆ ಸೇರಿದವರು. ಇಬ್ಬರೂ ಗೌಡರ್‌ ಗಳು ಪ್ರಾಬಲ್ಯ ಹೊಂದಿರುವ ತಮಿಳುನಾಡಿನ ಒಂದೇ ಪಶ್ಚಿಮ ಕೊಂಗು ಪ್ರದೇಶದಿಂದ ಬಂದವರು.

ಕೀಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈಗೆ ಬಿಜೆಪಿ ನಿರ್ಧಾರವನ್ನು ತಿಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಮಿತ್‌ ಶಾ ಅವರು, ಪಳನಿಸ್ವಾಮಿ ಅವರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ಈ ಸಭೆ ನಡೆಯಿತು.

ಇದನ್ನೂ ಓದಿ:ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 12 ರಿಂದ 6ಕ್ಕೆ ಇಳಿಕೆಯಾಗಿದೆ ಎಂದ ಅಮಿತ್ ಶಾ..! 2026ರ ಮಾರ್ಚ್‌ 31ರೊಳಗೆ ನಕ್ಸಲಿಸಂ ಅನ್ನು ಶಾಶ್ವತವಾಗಿ ಕಿತ್ತೊಗೆಯುತ್ತೇವೆ ಎಂದ ಗೃಹಸಚಿವ..!

ಪುಟ್ಟ ಮಗುವಿನ ಅಪರೂಪದ ಕಾಯಿಲೆಯ ಚಿಕಿತ್ಸೆಗೆ ಸಹಕರಿಸುವಂತೆ ಮನವಿ ಮಾಡಿದ ಕಿಚ್ಚ ಸುದೀಪ್‌..! ಚಿಕಿತ್ಸೆಗೆ ಬರೋಬ್ಬರಿ 16 ಕೋಟಿ ರೂಪಾಯಿ ವೆಚ್ಚ..!

See also  ಶಾಲೆಯಲ್ಲಿ ಪಾಠ ಕೇಳುವಾಗಲೇ ಕುಸಿದು ಬಿದ್ದ ಬಾಲಕ, 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget